Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ : ವಾರಾಂತ್ಯ ಕರ್ಫ್ಯೂ, ಏನಿರುತ್ತೆ, ಏನಿರಲ್ಲ ? 

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.06):ಕೋವಿಡ್-19ರ ಮೂರನೇ ಅಲೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿಯಂತೆ ಜನವರಿ 19ರವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕಫ್ರ್ಯೂ ಸೇರಿದಂತೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ.

ವಾರಾಂತ್ಯದ ಎರಡು ದಿನ ಕಫ್ರ್ಯೂ ಶುಕ್ರವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವೆರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ತುರ್ತು ಮತ್ತು ಅಗತ್ಯ ಚಟುವಟಕೆಗಳನ್ನು  ಹೊರತುಪಡಿಸಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಎಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಸರ್ಕಾರದ ಅಧೀನ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಕೋವಿಡ್-19 ಮತ್ತು ಅಗತ್ಯ ಸೇವೆಗಳನ್ನು ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಓಡಾಟಕ್ಕೆ ಯಾವುದೇ ಅಡ್ಡಿ ಇಲ್ಲ.

ಎಲ್ಲ ಸಾರ್ವಜನಿಕ ಉದ್ಯಾನಗಳ ಬಾಗಿಲು ಬಂದ್, ಎಲ್ಲ ರೀತಿಯ ಉದ್ಯಮಗಳು ಮತ್ತು ಐಟಿ ಉದ್ಯಮಗಳಿಗೆ ಕಫ್ರ್ಯೂನಿಂದ ವಿನಾಯಿತಿ ನೀಡಲಾಗಿದೆ. ಎಲ್ಲಾ ಉದ್ಯೋಗಿಗಳ ಓಡಾಟಕ್ಕೆ ಅವಕಾಶವಿದೆ. ಸಿಬ್ಬಂದಿ ಕೆಲಸ ಮಾಡುವ ಸಂಸ್ಥೆಗಳ ಗುರುತಿನ ಚೀಟಿ ಹೊಂದಿರಬೇಕು. ರೋಗಿಗಳು ಮತ್ತು ಅವರನ್ನು ನೋಡಿಕೊಳ್ಳುವವರು ತುರ್ತುಸಂದರ್ಭದಲ್ಲಿ ಓಡಾಟಕ್ಕೆ ಅವಕಾಶವಿದೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹೋಗುವವರಿಗೆ ಅಡ್ಡಿ ಇಲ್ಲ. ಆಹಾರ, ದಿನಸಿ ಹಣ್ಣು-ತರಕಾರಿ, ಮೀನು, ಮಾಂಸ, ಹಾಲಿನ ಬೂತ್ ಮತ್ತು ಪ್ರಾಣಿಗಳ ಆಹಾರಗಳ ಮಾರಾಟ ಮಳಿಗೆಗಳು ತೆರೆಯಲು ಅವಕಾಶವಿದೆ.

ನ್ಯಾಯಬೆಲೆ ಅಂಗಡಿ, ಬೀದಿ ವ್ಯಾಪಾರಿಗಳಿಗೂ ಅವಕಾಶವಿದೆ. ಮನೆಗಳಿಗೆ ವಿವಿಧ ಪದಾರ್ಥ ಮತ್ತು ವಸ್ತುಗಳನ್ನು ತಂದು ಕೊಡುವುದಕ್ಕೆ ಅವಕಾಶವಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್‍ಗಳಿಂದ ಆಹಾರ ಪಾರ್ಸಲ್ ಮಾತ್ರ, ಕುಳಿತು ತಿನ್ನಲು ಅವಕಾಶ ಇರುವುದಿಲ್ಲ. ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅವಕಾಶವಿದ್ದು ಟಿಕೆಟ್ ತೋರಿಸಬೇಕು.

ಹೊರಾಂಗಣ ಮದುವೆಗಳಿಗೆ 200 ಜನರಿಗೆ ಒಳಾಂಗಣ ಮದುವೆಗೆ 100 ಜನರನ್ನಷ್ಟೇ ಮಿತಿಗೊಳಿಸಲಾಗಿದೆ.

ಕೋವಿಡ್-19 ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!