Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಗುಣಮಟ್ಟ ಕಾಯ್ದುಕೊಳ್ಳಲು ತಾಕೀತು

---Advertisement---

ಚಿತ್ರದುರ್ಗ ಡಿ. 16 :  ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ಬೆಳ್ಳಂ ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಒದಗಿಸುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದರು.

ಪ್ರವಾಸಿ ಮಂದಿರದ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಡುಗೆ ತಯಾರಿಕೆ ಕೊಠಡಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟ, ಶುಚಿ-ರುಚಿ ಕೊರತೆ, ದಾಖಲೆಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ.

ಕ್ಯಾಂಟೀನ್‍ನಲ್ಲಿ ಉಪಹಾರ ಹಾಗೂ ಊಟದ ತಯಾರಿಕೆ ಉತ್ತಮವಾಗಿಲ್ಲ, ಉಪಹಾರ ರುಚಿಕಟ್ಟಾಗಲು ಅಗತ್ಯವಿರುವ ಸಾಮಗ್ರಿಗಳ ಸಮರ್ಪಕ ಬಳಕೆಯಾಗುತ್ತಿಲ್ಲ, ಹೀಗಾಗಿ ಸಾರ್ವಜನಿಕರು ಇಂದಿರಾ ಕ್ಯಾಂಟೀನ್‍ಗೆ ಹೆಚ್ಚು ಬರುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಕಡಿಮೆ ದರದಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಹಾಗೂ ರುಚಿಯಾದ ಊಟೋಪಹಾರ ಒದಗಿಸಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಿವಿಧೆಡೆ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿ, ನಡೆಸಲಾಗುತ್ತಿದೆ.

ಆದರೆ ಸಿಬ್ಬಂದಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕ್ಯಾಂಟೀನ್ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ.  ಕ್ಯಾಂಟೀನ್‍ಗೆ ಎಷ್ಟು ಆಹಾರ ಧಾನ್ಯ ಹಾಗೂ ಅಡುಗೆ ಸಾಮಗ್ರಿ ಸ್ವೀಕರಿಸಲಾಗಿದೆ, ಎಷ್ಟು ಪ್ರಮಾಣದಲ್ಲಿ ಎಷ್ಟು ಜನರಿಗೆ ಊಟೋಪಹಾರ ವಿತರಿಸಲಾಗಿದೆ ಎಂಬುದರ ಬಗ್ಗೆ ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಿಸಿಲ್ಲ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್‍ಗೆ ಆಹಾರದ ಗುಣಮಟ್ಟ ಪರಿಶೀಲನೆಗೆ ಸಂಬಂಧಪಟ್ಟ ಅಧಿಕಾರಿ ಪ್ರತಿ ನಿತ್ಯ ಭೇಟಿ ಮಾಡಿ ಪರಿಶೀಲಿಸಬೇಕು,  ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು, ಮುಖ್ಯಾಧಿಕಾರಿಗಳು ವಾರಕ್ಕೊಮ್ಮೆ ಕ್ಯಾಂಟೀನ್‍ಗೆ ಭೇಟಿ ನೀಡಿ, ಅಲ್ಲಿಯೇ ಉಪಹಾರ ಮತ್ತು ಊಟ ಸೇವಿಸಿ ಪರಿಶೀಲಿಸಬೇಕು.

ಅಲ್ಲದೆ ಅಡುಗೆ ಸಾಮಗ್ರಿಗಳ ದಾಸ್ತಾನು, ಬಳಕೆ, ಊಟೋಪಹಾರ ವಿತರಣೆ ಪ್ರಮಾಣ ಕುರಿತಂತೆ ನಿತ್ಯ ರಜಿಸ್ಟರ್‍ನಲ್ಲಿ ಮಾಹಿತಿ ದಾಖಲಾಗಬೇಕು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆರೋಗ್ಯ ನಿರೀಕ್ಷಕರು ಸ್ವಚ್ಛತೆ ಹಾಗೂ ಶುಚಿತ್ವ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳು ನಿತ್ಯ ಕ್ಯಾಂಟೀನ್‍ನಲ್ಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಬರುವ ದಿನಗಳಲ್ಲಿ ಜಿಲ್ಲೆಯಲ್ಲಿನ ಇಂದಿರಾ ಕ್ಯಾಂಟೀನ್‍ಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು, ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಹೇಳಿದರು.

ಕಸ ವಿಲೇವಾರಿ ಸಮರ್ಪಕವಾಗಿಸಿ : ನಗರದ ವಿವಿಧೆಡೆ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮನೆ ಮನೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ ಕಾರ್ಯ ಸಮರ್ಪಕವಾಗಿ ಆಗಬೇಕು, ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಿಸಿಯೇ ಪಡೆಯಬೇಕು, ನಗರದ ಚರಂಡಿಗಳನ್ನು ಸ್ವಚ್ಛವಾಗಿರಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಅಭಿಯಂತರ ಜಾಫರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...