Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಗರಸಭೆಗೆ ಡಿಸಿ ಟಿ.ವೆಂಕಟೇಶ್ ದಿಢೀರ್ ಭೇಟಿ: ಇ-ಸ್ವತ್ತು ವಿಳಂಬಕ್ಕೆ ಕಿಡಿ, ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ

---Advertisement---

ಚಿತ್ರದುರ್ಗ. ಏ.08: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಬುಧವಾರ ನಗರಸಭೆ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಇ-ಸ್ವತ್ತು ವಿತರಣೆ ಹಾಗೂ ಸಾರ್ವಜನಿಕ ಕೆಲಸಗಳ ವಿಳಂಬಕ್ಕೆ ಅಸಮಧಾನ ವ್ಯಕ್ತಪಡಿಸಿದರು.

ಪರಿಶೀಲನೆ ವೇಳೆ ಸಾರ್ವಜನಿಕರಿಂದ ಕೇಳಿಬಂದ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಇ-ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ತಿಂಗಳುಗಟ್ಟಲೆ ಇ-ಸ್ವತ್ತು ಅರ್ಜಿಗಳನ್ನು ಬಾಕಿ ಇಟ್ಟುಕೊಳ್ಳುವುದು ಸರಿಯಲ್ಲ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಪರಿಶೀಲಿಸಿ ವಿತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಂತ್ರಿಕ ಕಾರಣಗಳನ್ನು ನೀಡಿ ಸಾರ್ವಜನಿಕರನ್ನು ಅಲೆದಾಡಿಸಬಾರದು. ಒಂದು ವೇಳೆ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತಂದು ಬಗೆಹರಿಸಿಬೇಕು ಎಂದರು.

ಶಿಸ್ತು ಕ್ರಮದ ಎಚ್ಚರಿಕೆ:
ಕಚೇರಿಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ, ಬಾಕಿ ಇರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಗಡುವು ನೀಡಿದರು. ಕಂಪ್ಯೂಟರ್ ಮತ್ತು ಆನ್‌ಲೈನ್ ಸೌಲಭ್ಯಗಳಿದ್ದರೂ ಕೆಲಸ ವೇಗವಾಗಿ ನಡೆಯುತ್ತಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಕರ್ತವ್ಯ ಲೋಪ ಎಸಗುವ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದರು.

ನಗರಸಭೆ ವ್ಯಾಪ್ತಿಯ ಜನಸಾಮಾನ್ಯರಿಗೆ ಯಾವುದೇ ಅಡೆತಡೆಯಿಲ್ಲದೆ ಸೇವೆ ಸಿಗುವಂತೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕು ಎಂದು ತಾಕೀತು ಮಾಡಿದರು. ಜಿಲ್ಲಾಧಿಕಾರಿಗಳ ಭೇಟಿಯಿಂದ ನಗರಸಭೆಯ ಅಧಿಕಾರಿಗಳಲ್ಲಿ ಸಂಚಲನ ಮೂಡಿದ್ದು, ಸಾರ್ವಜನಿಕರು ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತೆ ಲಕ್ಷ್ಮೀ ನಗರಸಭೆ ಕಾರ್ಯಪಾಲಕ ಇಂಜಿನಿಯರ್ ರಾಜು, ಕಂದಾಯ ಅಧಿಕಾರಿ ಪ್ರಕಾಶ್, ಕಚೇರಿ ವ್ಯವಸ್ಥಾಪಕ ಜಯಣ್ಣ ಸೇರಿದಂತೆ ಮತ್ತಿರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now