Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ಗೆ 7.28 ಕೋಟಿ ಲಾಭ : ಅಧ್ಯಕ್ಷ ಡಿ. ಸುಧಾಕರ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಪ್ರಸಕ್ತ 2022-23 ನೇ ಸಾಲಿಗೆ ರೂ.728.05 ಲಕ್ಷ ಲಾಭಗಳಿಸಿರುತ್ತದೆ. ಬ್ಯಾಂಕ್ 2022-23 ನೇ ಸಾಲಿಗೆ 509.19 ಕೋಟಿ ಠೇವಣಿ ಸಂಗ್ರಹಣೆ ಮಾಡಿದ್ದು, 56803 ರೈತರಿಗೆ ಶೂನ್ಯ ಬಡ್ಡಿದರದಲ್ಲಿ ರೂ.463.00 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ
ಶನಿವಾರ ನಡೆದ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 60 ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿಯ 7053 ರೈತರಿಗೆ ರೂ.43.93 ಕೋಟಿ ಮತ್ತು ಪರಿಶಿಷ್ಟ ಪಂಗಡದ 7654 ರೈತರಿಗೆ ರೂ.63.68 ಕೋಟಿ ಸಾಲ ವಿತರಿಸಲಾಗಿದೆ. ಹಾಗೂ ಶೇ.3% ಬಡ್ಡಿದರದಲ್ಲಿ 1360 ರೈತರಿಗೆ ರೂ.87.25 ಕೋಟಿ ಭೂ ಅಭಿವೃದ್ದಿ ಮದ್ಯಮಾವಧಿ ಕೃಷಿ ಸಾಲ ವಿತರಿಸಿದೆ. 232.86 ಲಕ್ಷ ಕೃಷಿಯೇತರ ಸಾಲ ವಿತರಿಸಲಾಗಿದೆ. ಬ್ಯಾಂಕ್ 2022-23 ನೇ ಸಾಲಿನಲ್ಲಿ ರೂ.728.05 ಲಕ್ಷ ಲಾಭಗಳಿಸುವುದರ ಮೂಲಕ ಉತ್ತಮ ಸಾಧನೆ ಮಾಡಿರುತ್ತದೆ ಎಂದು ಹೇಳಿದರು.

ಮುಂದಿನ ವರ್ಷದಲ್ಲಿ 10000 ಹೊಸ ರೈತರಿಗೆ ರೂ.48.00 ಕೋಟಿ ಬೆಳೆ ಸಾಲ, 812 ಹೊಸ ರೈತರಿಗೆ ರೂ.76.00 ಕೋಟಿ ಮಧ್ಯಮಾವಧಿ ಸಾಲ ಹಾಗೂ ರೂ.210.00 ಲಕ್ಷ ಕೃಷಿಯೇತರ ಸಾಲಗಳನ್ನು ವಿತರಿಸುವ ಗುರಿ ಹೊಂದಿದ್ದು ರೂ.5.00 ಕೋಟಿ ಲಾಭಗಳಿಸಲು ಗುರಿ ಹಾಕಿಕೊಂಡಿದ್ದು ಪ್ರಗತಿ ಸಾಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಹಾಗೂ ರೂ.560.00 ಕೋಟಿ ಠೇವಣಿ ಸಂಗ್ರಹಣೆ ಮಾಡುವ ಗುರಿ ಹೊಂದಿದ್ದು ಇತರೆ ವಾಣಿಜ್ಯ ಹಾಗೂ ಗ್ರಾಮೀಣ ಬ್ಯಾಂಕ್‍ಗಳು ಠೇವಣಿಗಳ ಮೇಲೆ ನೀಡುವ ಬಡ್ಡಿ ದರಕ್ಕಿಂತ ಶೇ.0.50% ರಷ್ಟು ಹೆಚ್ಚಿಗೆ ಬಡ್ಡಿಯನ್ನು ನಮ್ಮ ಬ್ಯಾಂಕಿನಲ್ಲಿ ನೀಡಲಾಗುತ್ತಿದೆ. ಆದ್ದರಿಂದ ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಬ್ಯಾಂಕಿನಲ್ಲಿ ಠೇವಣಿ ಮಾಡಲು ಕೋರಿದರು. ಆದ್ದರಿಂದ ಸದಸ್ಯರು ಹಾಗೂ ಸಾರ್ವಜನಿಕರು ಇನ್ನೂ ಹೆಚ್ಚು ಠೇವಣಿ ಮಾಡಲು ಕೋರಿದರು. ಜಿಲ್ಲೆಯ ಗ್ರಾಮಾಂತರ ಪ್ರಧೇಶಗಳಲ್ಲಿ ಹೊಸದಾಗಿ ಬ್ಯಾಂಕಿನ  8 ಹೊಸ ಶಾಖೆಗಳನ್ನು ತೆರಯಲು ಆರ್.ಬಿ.ಐ ನಿಂದ ಅನುಮತಿ ಬಂದಿರುತ್ತದೆ. ಶೀಘ್ರದಲ್ಲಿ 8 ಹೊಸ ಶಾಖೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಬ್ಯಾಂಕಿಗೆ ರಾಷ್ಟ್ರೀಯ ಸಹಕಾರ ಸಂಸ್ಥೆಯಾದ NAFSCOB  ನಿಂದ 2021-22ನೇ ಸಾಲಿಗೆ ಇಡೀ ರಾಷ್ಟ್ರಕ್ಕೆ 2ನೇ ಉತ್ತಮ ಬ್ಯಾಂಕ್ ಎಂದು ಪ್ರಶಸ್ತಿ ಬಂದಿರುತ್ತದೆ.

ಇದಕ್ಕಾಗಿ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳಿಗೆ, ಬ್ಯಾಂಕಿನ ಅಭಿವೃದ್ಧಿಗೆ ಕಾರಣರಾದ ಎಲ್ಲಾ ಸದಸ್ಯ ಸಂಘಗಳಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಚಳ್ಳಕೆರೆ ವಿಧಾನ ಸಭೆ ಕ್ಷೇತ್ರದ ಶಾಸಕರು ಹಾಗೂ ಬ್ಯಾಂಕಿನ ನಿರ್ದೇಶಕರಾದ  ಟಿ.ರಘುಮೂರ್ತಿಯವರು ಮಾತನಾಡಿ,  ಬ್ಯಾಂಕ್ ವರ್ಷದಿಂದ  ವರ್ಷಕ್ಕೆ ಅಭಿವೃದ್ದಿಯತ್ತ ಸಾಗುತ್ತಿದ್ದು 8 ವರ್ಷಗಳಿಂದೀಚೆಗೆ  ಸತತವಾಗಿ ಲಾಭದಲ್ಲಿ ಮುನ್ನೆಡೆಯುತ್ತಿದೆ. ಬ್ಯಾಂಕಿನಿಂದ ಜಿಲ್ಲೆಯ ರೈತರಿಗೆ ಸುಮಾರು 954.00 ಕೋಟಿ ಸಾಲವನ್ನು ನೀಡಲಾಗಿದೆ. ರೈತರು ಹೆಚ್ಚಿನ  ಸಾಲ ಪಡೆದು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹೆಚ್.ಬಿ.ಮಂಜುನಾಥ್, ವ್ಯವಸ್ಥಾಪಕ ನಿರ್ದೇಶಕರಾದ ಇಲ್ಯಾಸ್ಉಲ್ಲಾ ಷರೀಫ್ ಹಾಗೂ ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿ ನಿರ್ದೇಶಕರುಗಳು  ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...