ಬೆಂಗಳೂರು: ಇವತ್ತು ಕೆಂಪೇಗೌಡ ಜಯಂತಿ. ಎಲ್ಲೆಡೆ ಜಯಂತಿ ಆಚರಿಸಿ, ಸ್ಮರಿಸಿಲಾಗಿದೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೆ ತಿಂಗಳ 27ರಂದು ಸರ್ಕಾರದ ವತಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರತಿ ವರ್ಷ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವರ್ಷದ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಒಂದು ಜಯದೇವ ಹೃದ್ರೋಗದ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ. ಎಲ್. ಶಂಕರ್ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ. ಈ ಪ್ರಶಸ್ತಿ ಜೊತೆಗೆ 5 ಲಕ್ಷ ನೀಡಲಾಗುತ್ತದೆ. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ಅವರಿಂದ ಕಸಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ ಎಂದಿದ್ದಾರೆ.