ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತೆಯೇ ಸರಿ. ನಿನ್ನೆ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡೂವರೆ ವರ್ಷವೂ ನಾನೇ ಸಿಎಂ ಆಗಿ ಇರ್ತೀನಿ. ಮುಂದಿನ ದಸರಾವನ್ನು ನಾನೇ ಯಾಕೆ ಉದ್ಘಾಟನೆ ಮಾಡಬಾರದು ಎಂಬ ಪ್ರಶ್ನೆ ಮಾಡಿದ್ದರು. ನವೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತೆ. ಆಗ ಆ ಸಿಎಂ ಹುದ್ದೆಯನ್ನ ಸಿದ್ದರಾಮಯ್ಯ ಅವರು ಬಿಟ್ಟುಕೊಡುತ್ತಾರೆ ಎಂಬ ಚರ್ಚೆಗಳು ಆಗ್ತಾ ಇದಾವೆ.
ಅದಕ್ಕೆ ತಕ್ಕಂತೆ ಡಿಕೆ ಶಿವಕುಮಾರ್ ಬೆಂಬಲಿಗರು ಡಿಕೆಶಿಗೆ ಬಹುಪರಾಕ್ ಕೂಗುತ್ತಾ ಇದ್ದಾರೆ. ಆದರೆ ಪಕ್ಷದ ವಿಚಾರಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರಿಗೂ ಅಧಿಕಾರ ಹಂಚಿಕೆಯ ಬಗ್ಗೆ ಮಾತನಾಡುವ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರೂ ಸಹ ಮಾತನಾಡಬಾರದು. ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ಎಲ್ಲಿ ಇದೆ..? ಮಾಧ್ಯಮದವರು ಬೇರೆ ರೀತಿಯಲ್ಲಿಯೇ ಬರೆಯುತ್ತಾರೆ.
ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಯಾರೂ ಚರ್ಚೆ ಮಾಡಬಾರದು. ಇದರ ಬಗ್ಗೆ ಮಾತನಾಡಬಾರದು. ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ಮಾತನಾಡಿದರು ಡ್ಯಾಮೇಜ್ ಆಗೋದು ಪಕ್ಷಕ್ಕೆ, ನನ್ನ ಪರವಾಗಿ ಮಾತನಾಡಿದರು ಡ್ಯಾಮೇಜ್ ಆಗುವುದು ಪಕ್ಷಕ್ಕೆ. ಇದರ ಬಗ್ವರ ಚರ್ಚೆ ಮಾಡಿದರೆ ಪಜ್ಷ ವಿರೋಧಿ ಚಟುವಟಿಕೆ ಮಾಡಿದಂತೆ. ಸಿದ್ದರಾಮಯ್ಯನವರು ಏನು ಹೇಳಿದ್ದಾರೋ ಅಷ್ಟೇ . ಅವರು ಹೇಳಿದ್ದಾರಲ್ಲ ಹೈಕಮಾಂಡ್ ಏನು ಹೇಳ್ತಾರೋ ಅದನ್ನ ಕೇಳ್ತೀವಿ ಅಂತ . ಹೀಗಾಗಿ ನಮಗೆ ಪಕ್ಷ ಮುಖ್ಯವೇ ಹೊರತು, ವ್ಯಕ್ತಿಯಲ್ಲ. ಪಕ್ಷ ಹೇಳಿದಂಗೆ ಕೇಳಿಕೊಂಡು ಹೋಗ್ತಿವಿ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೀವು ಹೇಳಿದ್ದು ನಮ್ಮ ಬಾಯಲ್ಲಿ ಹೇಳಿಸೋಕೆ ಹೋಗಬೇಡಿ, ನಾನು ಮೂರ್ಖನಲ್ಲ ಎಂದಿದ್ದಾರೆ.

