Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸ್ಥಾನ ಬದಲಾವಣೆ ಬಗ್ಗೆ ಮಾತನಾಡದಂತೆ ಮತ್ತೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್..!

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತೆಯೇ ಸರಿ. ನಿನ್ನೆ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡೂವರೆ ವರ್ಷವೂ ನಾನೇ ಸಿಎಂ ಆಗಿ ಇರ್ತೀನಿ. ಮುಂದಿನ ದಸರಾವನ್ನು ನಾನೇ ಯಾಕೆ ಉದ್ಘಾಟನೆ ಮಾಡಬಾರದು ಎಂಬ ಪ್ರಶ್ನೆ ಮಾಡಿದ್ದರು. ನವೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತೆ‌. ಆಗ ಆ ಸಿಎಂ ಹುದ್ದೆಯನ್ನ ಸಿದ್ದರಾಮಯ್ಯ ಅವರು ಬಿಟ್ಟುಕೊಡುತ್ತಾರೆ ಎಂಬ ಚರ್ಚೆಗಳು ಆಗ್ತಾ ಇದಾವೆ.

ಅದಕ್ಕೆ ತಕ್ಕಂತೆ ಡಿಕೆ ಶಿವಕುಮಾರ್ ಬೆಂಬಲಿಗರು ಡಿಕೆಶಿಗೆ ಬಹುಪರಾಕ್ ಕೂಗುತ್ತಾ ಇದ್ದಾರೆ. ಆದರೆ ಪಕ್ಷದ ವಿಚಾರಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರಿಗೂ ಅಧಿಕಾರ ಹಂಚಿಕೆಯ ಬಗ್ಗೆ ಮಾತನಾಡುವ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರೂ ಸಹ ಮಾತನಾಡಬಾರದು. ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ಎಲ್ಲಿ ಇದೆ..? ಮಾಧ್ಯಮದವರು ಬೇರೆ ರೀತಿಯಲ್ಲಿಯೇ ಬರೆಯುತ್ತಾರೆ.

ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಯಾರೂ ಚರ್ಚೆ ಮಾಡಬಾರದು. ಇದರ ಬಗ್ಗೆ ಮಾತನಾಡಬಾರದು. ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ಮಾತನಾಡಿದರು ಡ್ಯಾಮೇಜ್ ಆಗೋದು ಪಕ್ಷಕ್ಕೆ, ನನ್ನ ಪರವಾಗಿ ಮಾತನಾಡಿದರು ಡ್ಯಾಮೇಜ್ ಆಗುವುದು ಪಕ್ಷಕ್ಕೆ. ಇದರ ಬಗ್ವರ ಚರ್ಚೆ ಮಾಡಿದರೆ ಪಜ್ಷ ವಿರೋಧಿ ಚಟುವಟಿಕೆ ಮಾಡಿದಂತೆ. ಸಿದ್ದರಾಮಯ್ಯನವರು ಏನು ಹೇಳಿದ್ದಾರೋ ಅಷ್ಟೇ .  ಅವರು ಹೇಳಿದ್ದಾರಲ್ಲ ಹೈಕಮಾಂಡ್ ಏನು ಹೇಳ್ತಾರೋ ಅದನ್ನ ಕೇಳ್ತೀವಿ ಅಂತ .  ಹೀಗಾಗಿ ನಮಗೆ ಪಕ್ಷ ಮುಖ್ಯವೇ ಹೊರತು,  ವ್ಯಕ್ತಿಯಲ್ಲ.  ಪಕ್ಷ ಹೇಳಿದಂಗೆ ಕೇಳಿಕೊಂಡು ಹೋಗ್ತಿವಿ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೀವು ಹೇಳಿದ್ದು ನಮ್ಮ ಬಾಯಲ್ಲಿ ಹೇಳಿಸೋಕೆ ಹೋಗಬೇಡಿ,  ನಾನು ಮೂರ್ಖನಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now