ಡಿಸಿಎಂ ಡಿಕೆ ಶಿವಕುಮಾರ್ ವಿದೇಶಿ ಪ್ರಯಾಣ ನಿರ್ಬಂಧಕ್ಕೆ ವಿನಾಯಿತಿ..!

suddionenews
1 Min Read

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ವಿದೇಶ ಪ್ರವಾಸಕ್ಕಿರುವ ನಿರ್ಬಂಧಕ್ಕೆ ವಿನಾಯಿತಿ ಸಿಕ್ಕಿದ್ದು, ದುಬೈಗೆ ತೆರಳಲು ಅನುಮತಿ ಸಿಕ್ಕಿದೆ. ದುಬೈಗೆ ತೆರಳಲು ಡಿಸಿಎಂ ಡಿಕೆ ಶಿವಕುಮಾರ್ ಅನುಮತಿ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದುಬೈಗೆ ತೆರಳಲು ಅನುಮತಿ ನೀಡಿದೆ‌.

ನವೆಂಬರ್ 29ರಿಂದ ಡಿಸೆಂಬರ್ 3ರ ತನಕ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಬೇಕಿದೆ. ಹೀಗಾಗಿ ದುಬೈಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಧೀಶೆ, ಜೆ ಪ್ರೀತ್ ಅನುಮತಿ ನೀಡಿದ್ದಾರೆ.

 

ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್​ಗೆ ಇತ್ತೀಚೆಗಷ್ಟೇ ಅರ್ಜಿ ಸಲ್ಲಿಕೆಯಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕಿರುವ ನಿರ್ಬಂಧಕ್ಕೆ ಈಗ ವಿನಾಯಿತಿ ದೊರೆತಿದೆ.

Share This Article
Leave a Comment

Leave a Reply

Your email address will not be published. Required fields are marked *