ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ವಿದೇಶ ಪ್ರವಾಸಕ್ಕಿರುವ ನಿರ್ಬಂಧಕ್ಕೆ ವಿನಾಯಿತಿ ಸಿಕ್ಕಿದ್ದು, ದುಬೈಗೆ ತೆರಳಲು ಅನುಮತಿ ಸಿಕ್ಕಿದೆ. ದುಬೈಗೆ ತೆರಳಲು ಡಿಸಿಎಂ ಡಿಕೆ ಶಿವಕುಮಾರ್ ಅನುಮತಿ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದುಬೈಗೆ ತೆರಳಲು ಅನುಮತಿ ನೀಡಿದೆ.
ನವೆಂಬರ್ 29ರಿಂದ ಡಿಸೆಂಬರ್ 3ರ ತನಕ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಬೇಕಿದೆ. ಹೀಗಾಗಿ ದುಬೈಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಧೀಶೆ, ಜೆ ಪ್ರೀತ್ ಅನುಮತಿ ನೀಡಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್ಗೆ ಇತ್ತೀಚೆಗಷ್ಟೇ ಅರ್ಜಿ ಸಲ್ಲಿಕೆಯಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕಿರುವ ನಿರ್ಬಂಧಕ್ಕೆ ಈಗ ವಿನಾಯಿತಿ ದೊರೆತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















