Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಸಚಿವ ಪರಮೇಶ್ವರ್
---Advertisement---

ಬೆಂಗಳೂರು : ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಅಸ್ವಸ್ಥತೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ತಜ್ಞ ವೈದ್ಯರ ನೇತೃತ್ವದ ತಂಡವು ತುರ್ತು ನಿಗಾ ಘಟಕದಲ್ಲಿ (ICU) ತಪಾಸಣೆ ಮತ್ತು ಚಿಕಿತ್ಸೆ ಮುಂದುವರಿಸಿದೆ.

ಡಾ. ಜಿ. ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳು ಹಾಗೂ ಸಂಪುಟದ ಪ್ರಮುಖ ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.  ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ವೈದ್ಯರ ನಿರಂತರ ನಿಗಾ ಮತ್ತು ತಪಾಸಣೆ

ವೈದ್ಯರು ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ಅವರ ಚಿಕಿತ್ಸೆಗೆ ಸ್ಪಂದನೆ ಉತ್ತಮವಾಗಿದ್ದು, ಸಂಪೂರ್ಣ ತಪಾಸಣಾ ವರದಿ ಬಂದ ನಂತರ ಆಸ್ಪತ್ರೆಯು ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Join WhatsApp

Join Now

Join Telegram

Join Now