ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ವಿಚಾರ ಗೊಂದಲದ ಗೂಡಾಗಿದೆ. ಈ ವಿಚಾರಕ್ಕೆ ಹೈಕಮಾಂಡ್ ಎಂಟ್ರಿ ಆದ್ರೆ ಎಲ್ಲವೂ ಬಗೆಹರಿಯುತ್ತೆ ಎಂದುಕೊಂಡರೆ ಅತ್ತ ಹೈಕಮಾಂಡ್ ಮಾತ್ರ ಹಾವು ಸಾಯಬಾರದು, ಕೋಲು ಮುರಿಯಬಾರದು ಎಂಬ ಧೋರಣೆಯನ್ನ ಅನುಸರಿಸುತ್ತಿದೆ. ನೀವ್ ನೀವೇ ಬಗೆಹರಿಸಿಕೊಳ್ಳಿ ಎಂದು ಹೇಳಿದೆ ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ, ಒಂದು ಹಂತಕ್ಕೆ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದರು. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ವಿಚಾರ ಈಗ ಮತ್ತೆ ಸದ್ದು ಮಾಡಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ರೆ, ಇತ್ತ ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.
ಈ ಸಂಬಂಧ ಚರ್ಚೆ ನಡೆಸುವುದಕ್ಕೆ ನಾಳೆ ಬೆಳಗ್ಗೆ 11 ಗಂಟೆಗೆ ಸಮಯ ನಿಗದಿ ಮಾಡಲಾಗಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿನಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಪೂರ್ವಭಾವಿ ಸಭೆ ಕರೆದಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ಸಮಾವೇಶ ಯಾವಾಗ ನಡೆಸಬೇಕೆನ್ನುವುದನ್ನು ನಾಳಿನ ಸಭೆಯಲ್ಲಿ ತೀರ್ಮಾನವಾಗಲಿದೆ.
ಡಿಕೆ ಶಿವಕುಮಾರ್ ಇದೇ ಅವಧಿಗೆ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅದಕ್ಕಾಗಿ ಹೈಕಮಾಂಡ್ ಜೊತಗೆ ಮಾತುಕತೆಯನ್ನು ನಡೆಸುವ ಪ್ರಯತ್ನದಲ್ಲಿದ್ದಾರೆ. ಇದರ ನಡುವೆ ಶಜ್ರಿ ದೇವರುಗಳ ಮೊರೆ ಕೂಡ ಹೋಗಿದ್ದಾರೆ. ವಿಶೆರಷ ಪೂಜೆ, ಪುರಸ್ಕಾರಗಳನ್ನು ಮಾಡಿಸಿದ್ದಾರೆ. ಸ್ವಾಮೀಜಿಗಳೆಲ್ಲಾ ಆಶೀರ್ವಾದವನ್ನು ಮಾಡಿದ್ದಾರೆ. ಆದರೆ ಅದ್ಯಾಕೋ ಏನೋ ಸಿಎಂ ಕನಸಿಗೆ ಆ ಆಶೀರ್ವಾದಗಳೆಲ್ಲಾ ಸಾಥ್ ನೀಡಿದಂತೆ ಕಾಣಿಸುತ್ತಿಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











