Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗಕ್ಕೆ ಆಗಮಿಸಿದ ರೇಣುಕಾ ಸ್ವಾಮಿ ಮೃತದೇಹ : ಲಿಂಗಾಯತ ಸಮುದಾಯದಂತೆ ಅಂತ್ಯಸಂಸ್ಕಾರ…!

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ.11  : ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಮೃತದೇಹವನ್ನು ಚಿತ್ರದುರ್ಗಕ್ಕೆ ರಾತ್ರಿ 8 : 40 ಕ್ಕೆ ತುರುವನೂರು ರಸ್ತೆಯ ವಿಆರ್ ಎಸ್ ಬಡಾವಣೆಗೆ ತಲುಪಿತು.

 

ಇಂದು ಮಧ್ಯಾಹ್ನವೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ದೇಹದ ಮೇಲೆಲ್ಲಾ ದಾಳಿ ಮಾಡಿದ ಗಾಯಗಳಾಗಿರುವುದು ಕಂಡು ಬಂದಿದೆ. ಮುಖದ ಮೂಳೆ ಮುರಿದಿದ್ದಾರೆ, ಮೂಗನ್ನು ಜಜ್ಜಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹ ರವಾನೆ ಮಾಡಲಾಗಿದೆ. ಪೋಷಕರು ಬೆಂಗಳೂರಿನಿಂದ ಮೃತದೇಹದ ಜೊತೆಗೆ ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ. ಈಗ ಮೃತದೇಹ ಊರು ತಲುಪಿದೆ.

ಇಂದೇ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಸಂಜೆ  ಅಂತ್ಯಕ್ರಿಯೆ ನಡೆಸಲಾಗುತ್ತದೆ ಎನ್ನಲಾಗಿತ್ತು. ಆದರೆ ಮೃತದೇಹ ಈಗ ತಲುಪಿದ್ದು ಅಂತ್ಯಕ್ರಿಯೆಯನ್ನು ಇಂದೇ ನಡೆಸಲಾಗುತ್ತದೆ. ವೀರಶೈವ ಲಿಂಗಾಯತ ಸಮುದಾಯ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ನಗರದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗಳು ನಡೆಸಲಾಗುತ್ತದೆ.

ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಅವರನ್ನ ‌ಜೂನ್ 9ರಂದು ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...