Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜೀನಾಮೆ ನೀಡಲು ಎಂಎಲ್ಸಿ ನಜೀರ್ ಅಹ್ಮದ್ ಗೆ ಡೆಡ್ ಲೈನ್..!

---Advertisement---

ಬೆಂಗಳೂರು : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾ‌ನಕ್ಕೆ ರಾಜೀನಾಮಡ ನೀಡುವುದಕ್ಕೆ ಎಂಎಲ್ಸಿ ನಜೀರ್ ಅಹ್ಮದ್ ಅವರಿಗೆ ಡೆಡ್ಲೈನ್ ನಿಗದಿ‌ ಮಾಡಲಾಗಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಈ ಡೆಡ್ಲೈನ್ ನೀಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಇಂದು ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಒಂದು ವೇಳೆ ಸಂಜೆ ವೇಳೆಗೆ ನಜೀರ್ ಅಹ್ಮದ್ ರಾಜೀನಾಮೆ ಕೊಡದೆ ಹೋದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ‌ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ನಿನ್ನೆಯೇ ಪ್ರತಿಕ್ರಿಯೆ ಕೂಡ ನೀಡಿದ್ದಾರೆ. ನನ್ನ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ಇದುವರೆಗೂ ರಾಜೀನಾಮೆ ನೀಡಿಲ್ಲ. ಮುಂದೆ ನೀಡಬಹುದೇನೋ. ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ.

ನಜೀರ್ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕೆಲವರ ಪಕ್ಷ ವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾ್ದಾನ ವ್ಯಕ್ತಪಡಿಸಿದ್ದಾರೆಯೇ ಹೊರತು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಈಗಾಗಲೇ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬರ್ ರಾಜೀನಾಮೆಯನ್ನು ಕೊಟ್ಟಿದ್ದಾರೆ. ಆ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಂಗೀಕಾರವನ್ನು ಮಾಡಿದ್ದಾರೆ.‌ ಇದೀಗ ನಜೀರ್ ಅಹ್ಮದ್ ಅವರಿಗೆ ಡೆಡ್ ಲೈನ್ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now