ವಿಜಯಪುರ: ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೂವಿನಡಗಲಿಯಲ್ಲಿ ನಡೆದಿದೆ. ಬಣಕಾರ್ ಮಲ್ಲಪ್ಪ ಮೃತ ರೈತ. ಬಣಕಾರ್ ಮಲ್ಲಪ್ಪ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬಣಕಾರ್ ಮಲ್ಲಪ್ಪ ಹೂವಿನಡಗಲಿಯ ನಂದಿಹಳ್ಳಿ ಗ್ರಾಮದವರು. ಇವರ ಜಮೀನಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣವನ್ನ ವಿರೋಧಿಸಿದ್ದರು. ಅದಕ್ಕಾಗಿ ಸಾಕಷ್ಟು ಹೋರಾಟವನ್ನು ಮಾಡಿದ್ದವರು. ಅಷ್ಟೇ ಅಲ್ಲ ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿದ್ದವರ ವಿರುದ್ಧ ಹೋರಾಟ ಮಾಡುತ್ತಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಶವವಾಗಿ ಪತ್ತೆಯಾಗಿದ್ದಾರೆ.
ತಮ್ಮ ಜಮೀನಿನಲ್ಲಿ ನಿರ್ಮಾಣವಾಗುತ್ತಿರುವ ಮಿಜ ವಿಧಾನಸೌಧ ವಿರೋಧಿಸಿದ್ದರು. ಪರಿಹಾರ ನೀಡುವಂತೆ ಒತ್ತಾಯಿಸಿ, ಪ್ರತಿಭಟನೆ ಕೂಡ ಮಾಡಿದ್ದರು. ಅಧಿಕಾರಿಗಳ ವಿರುದ್ಧ ಹೈಕೋರ್ಟ್ ತನಕ ಹೋಗಿದ್ದರು. ಆದ್ರೆ ಜನವರಿ 30ರಂದು ಇದ್ದಕ್ಕಿದ್ದ ಹಾಗೇ ನಾಪತ್ತೆಯಾಗಿದ್ದರು. ಜ.31ರಂದು ಈ ಸಂಬಂಧ ಹೂವಿನಡಗಲಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಇದೀಗ ಶವ ಪತ್ತೆಯಾಗಿದ್ದು, ಶವದ ಪಕ್ಕ ವಿಷದ ಬಾಟೆಲ್ ಕೂಡ ಪತ್ತೆಯಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…