Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ‌ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು : 2 ಅಲ್ಲ 5 ಲಕ್ಷ ಪರಿಹಾರ..!

---Advertisement---

 

ಬಳ್ಳಾರಿ: ಬೀಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರದ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಮೃತ ಬಾಣಂತಿಯರ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಈಗ 5 ಲಕ್ಷ ಘೋಷಣೆ ಮಾಡಲಾಗಿದೆ. ಸರ್ಕಾರದಿಂದ 2 ಲಕ್ಷ ಘೋಷಣೆ‌ ಮಾಡುವುದರ ಜೊತೆಗೆ ಡ್ರಗ್ ಕಂಪನಿಯಿಂದಲೂ ಪರಿಹಾರ ವಸೂಲಿ ಮಾಡಲು ಸೂಚನೆ ನೀಡಲಾಗಿತ್ತು. ಇದೀಗ ಸರ್ಕಾರದಿಂದಾನೇ ಐದು ಲಕ್ಷ ಪರಿಹಾರ ಘೋಷಿಸಲಾಗಿದೆ.

ಈಗಾಗಲೇ ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಕಂಟ್ರೋಲರ್ ಉಮೇಶ್ ಎಂಬಾತನನ್ನು ಅಮಾನತು ಮಾಡಲಾಗಿದೆ. ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಬ್ಲಾಕ್ ಲೀಸ್ಟ್ ಗೆ ಸೇರಿಸಲಾಗಿದೆ. ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗಿದೆ. ಈಗಾಗಲೇ ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ.

ಬಳ್ಳಾರಿ ಆಸ್ಪತ್ರೆಯಲ್ಲಿ ಬಳಸಿದ್ದ ಔಷಧಿಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಘಟನೆಗೆ ಸಂಬಂಧಪಟ್ಟ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನು ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನರ್‌ರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment