ಬೆಂಗಳೂರು: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮ ಕೊಪ್ಪ ವಲಯದಲ್ಲಿ ಐದು ಹುಲಿಗಳು ಸಾವನ್ನಪ್ಪಿವೆ. ಈ ದೃಶ್ಯವನ್ನು ಕಂಡವರು ಅಯ್ಯೋ ಅಂತಿದ್ದಾರೆ. ಮರಿ ಹುಲಿಗಳು ಸಾವನ್ನಪ್ಪಿವೆ. ಈಗಾಗಲೇ ತನಿಖೆ ಶುರುವಾಗಿದ್ದು, ನಾಲ್ವರನ್ನು ವಶಕ್ಕೂ ಪಡೆಯಲಾಗಿದೆ. ಇದೀಗ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಕೆಂಪೇಗೌಡರ 516ನೇ ಜಯಂತಿಯನ್ನು ಆಚರಣೆ ಮಾಡಿದ್ದು, ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಗೆ ಆದೇಶ ನೀಡಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಹುಲಿಗಳ ಸಾವಿನ ಬಗ್ಗೆ ಡಿಸಿಎಫ್ ಚಕ್ರಪಾಣಿ ಮಾಹಿತಿ ನೀಡಿದ್ದು, ನಮ್ಮ ಸಿಬ್ಬಂದಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಗಸ್ತು ತಿರುಗುತ್ತಿದ್ದರು. ಈ ವೇಳೆ ಹುಲಿ ಬಿದ್ದಿದ್ದು ಗಮನಕ್ಕೆ ಬಂದಿದೆ. ಮತ್ತೆ ಅಲ್ಲಿ ನೋಡಿದಾಗ ಒಂದು ಹಸಿವಿನ ಕಳೆಬರಹ ಕಂಡು ಬಂದಿದೆ. ಮೇಲ್ನೋಟಕ್ಕೆ ಅಲ್ಲೊಂದು ಹಸು ಕೂಡ ಸತ್ತಿರುವ ಕಾರಣ ಇದೊಂದು ಅಸಹಜ ಸಾವು ಎಂಬಂತೆ ಕಾಣಿಸುತ್ತಿದೆ. ಪರೀಕ್ಷೆ ನಡೆಸಿ ವರದಿ ಬಂದ ನಂತರ ಸತ್ಯ ಗೊತ್ತಾಗಲಿದೆ.
ವೈಜ್ಞಾನಿಕ ಪ್ರಯೋಗಾಲಯದ ಪರೀಕ್ಷೆಯಲ್ಲಿ ಸತ್ಯ ಗೊತ್ತಾಗಲಿದೆ. ನಂತರ ಮುಂದಿನ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ. NTCA ಗೈಡ್ಲೆನ್ಸ್ ಪ್ರಕಾರ ಎಲ್ಲ ಹುಲಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಎಲ್ಲವು ಚಿಕ್ಕ ಮರಿಗಳಾದ ಕಾರಣ ಬೇಟೆಗೆ ತಾಯಿಯನ್ನೇ ಅವಲಂಬಿಸಿದ್ದವು. ಇದು ಟೆರಿಟರಿಗಾಗಿ ನಡೆದಿರುವ ಘಟನೆ ಅಲ್ಲ ಎಂದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಈ ಹಿಂದೆ ಹುಲಿದಾಳಿಯಂತಹ ಯಾವುದೇ ಪ್ರಕರಣಗಳು ಇಲ್ಲಿ ದಾಖಲಾಗಿಲ್ಲ. ಇದೇ ಮೊದಲ ಬಾರಿಗೆ ಘಟನೆ ನಡೆದಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.






















