ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯಕ್ಕೆ ಇದೊಂಥರ ಶಾಕಿಂಗ್ ಸುದ್ದಿಯೇ ಆಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಅವರ ಬಗ್ಗೆ ಹಂಚಿಕೊಂಡಿದ್ದಾರೆ.

ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ.

ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

