Connect with us

Hi, what are you looking for?

ಪ್ರಮುಖ ಸುದ್ದಿ

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆತಂಕಕಾರಿ : ಸಚಿವ ಸುಧಾಕರ್‌

ಹಾವೇರಿ : ಜಿಲ್ಲೆಯಲ್ಲಿ ಉತ್ತಮ ಮಟ್ಟದ ಆರೋಗ್ಯ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೋವಿಡ್‌ ನಿಯಂತ್ರಣದಲ್ಲಿ ಜಿಲ್ಲಾಡಳಿತ ಜವಾಬ್ದಾರಿಯುತವಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಹಾವೇರಿ ಜಿಲ್ಲೆ ಮರಣ ಪ್ರಮಾಣದ ಸರಾಸರಿಯಲ್ಲಿ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯ ಎಂದರು.

ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಇದ್ದರೂ ಸಾವಿನ ಪ್ರಮಾಣ ರಾಜ್ಯದ ಸರಾಸರಿಗೆ ಹೋಲಿಸಿದಾಗ ಹೆಚ್ಚಿದೆ. ಹೀಗಾಗಿ ಹರಡುವಿಕೆ ಮತ್ತು ಸಾವಿನ ಪ್ರಮಾಣ ನಿಯಂತ್ರಣಕ್ಕೆ ಒತ್ತು ನೀಡಬೇಕು.

ಸೋಂಕಿತರು ಪತ್ತೆ ಆದ ತಕ್ಷಣ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡಬೇಕು. ಸದ್ಯ ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳು 1836 ಇದೆ. ಈ ಪೈಕಿ ಹೋಮ್‌ ಐಸೊಲೇಶನ್‌ ನಲ್ಲಿ 613 ಮಂದಿ ಇದ್ದಾರೆ. ಇಂದು 209 ಡಿಸ್ಚಾರ್ಜ್‌, ಏಳು ಸಾವಿನ ಪ್ರಕರಣ ವರದಿಯಾಗಿದೆ ಎಂದು ವಿವರಿಸಿದರು.

ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಮನೆಯಲ್ಲೇ ಇರುವ ಸೋಂಕಿತರನ್ನು ಆದಷ್ಟು ಬೇಗ ಸ್ಥಳಾಂತರಿಸಿ ಹಾರೈಕೆ ನೀಡಬೇಕು. ಟೆಸ್ಟಿಂಗ್‌, ಟ್ರಾಕಿಂಗ್‌, ಟ್ರೀಟ್‌ಮೆಂಟ್‌ ಸೂತ್ರವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಸಾವಿನ ಪ್ರಮಾಣ ತಡೆಯಲಿ ಕ್ರಮವಹಿಸಬೇಕು. ಸೋಂಕಿತರ ಸಂಪರ್ಕಿತರು ಮತ್ತು ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಟೆಸ್ಟಿಂಗ್‌ ಕಡ್ಡಾಯಗೊಳಿಸಬೇಕು. ಇದರಿಂದ ಆರಂಭದಲ್ಲೇ ಸೋಂಕನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.

36 ಗಂಟೆಯೊಳಗೆ ಟೆಸ್ಟ್‌ಗಳ ಪರೀಕ್ಷಾ ವರದಿ ನೀಡಬೇಕು. ಇದರಿಂದ ಸೋಂಕಿತರಿಗೆ ಆರಂಭದಿಂದಲೇ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. 6 ತಾಲ್ಲೂಕು ಆಸ್ಪತ್ರೆಗಳಲ್ಲಿ ಎಲ್ಲಿ ಆಕ್ಸಿಜನ್‌ ಹಾಸಿಗೆ ಮತ್ತು ವೆಂಟಿಲೇಟರ್‌ ಕೊರತೆ ಇದ್ದರೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೊರತೆ ಇದ್ದಲ್ಲಿ ತಕ್ಷಣ ಒದಗಿಸಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!