
ಶಿವಮೊಗ್ಗ: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ಬಿ ಎಸ್ ಯಡಿಯೂರಪ್ಪ ಅವರ ಹುಟ್ಟು ಹಬ್ಬದ ದಿನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನಿಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ್ದು, ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. 20026ರ ಹಿಂದಿನ ಶಿವಮೊಗ್ಗ ಹಾಗೂ ಇಂದಿನ ಶಿವಮೊಗ್ಗಕ್ಕೂ ಅಜಗಜಾಂತರ ವ್ಯತ್ಯಾಸವಿದರ. ಜಿಲ್ಲೆಯಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ನಾವೂ ಕಾಣುತ್ತಿದ್ದೇವೆ. ಇಂದು ಸುಮಾರು 1000 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆಯ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
GIPHY App Key not set. Please check settings