Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗಲಿದ ಜನನಾಯಕನಿಗೆ ಭೋವಿ ಗುರುಪೀಠದ ಶ್ರೀಗಳಿಂದ ಭಾವಪೂರ್ಣ ಸಂತಾಪ

---Advertisement---

ಸುದ್ದಿಒನ್, ಹಿರಿಯೂರು, ಮೇ. 10 : ಜಾತಿ ರಾಜಕಾರಣದ ಮಿತಿಗಳನ್ನು ಮೀರಿ, ವೈಯಕ್ತಿಕವಾಗಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅಪರೂಪದ ರಾಜಕಾರಣಿಯೊಬ್ಬರಾದ ಡಿ ಸುಧಾಕರ ಅವರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಭೋವಿ ಗುರುಪೀಠದ ಜಗದ್ಗುರು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಗಲಿದ ಸಚಿವರಾದ ಡಿ ಸುಧಾಕರ ಕುರಿತು ತಮ್ಮ ಶೋಕ ಸಂದೇಶ ಹಂಚಿಕೊಂಡಿರುವ ಶ್ರೀಗಳು, “ಅವರು ಕೇವಲ ಒಬ್ಬ ಜನಪ್ರತಿನಿಧಿಯಾಗಿರದೆ, ಜನರ ನೋವಿಗೆ ಮಿಡಿಯುವ ಸಹಾಯಹಸ್ತವಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ಸಮಾಜಕ್ಕೆ ಅವರು ನೀಡಿದ ಕೊಡುಗೆ ಅನನ್ಯವಾದುದು. ಜಾತ್ಯತೀತ ಪರಿಕಲ್ಪನೆಯಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ಅವರ ಗುಣ ಎಲ್ಲರಿಗೂ ಮಾದರಿಯಾಗಿತ್ತು,” ಎಂದು ಸ್ಮರಿಸಿದ್ದಾರೆ.

ಕೊನೆಯ ಕ್ಷಣದ ನೆನಪು:
“ನಮ್ಮ ಮೀಸಲಾತಿ ಹೋರಾಟದ ಮಹತ್ವದ ಕ್ಷಣಗಳಿಗೆ ಸಾಕ್ಷಿಯಾಗಲು ಅವರು ಸರ್ಕಾರದ ಪರವಾಗಿ ಬಂದು ಮನವಿ ಸ್ವೀಕರಿಸಿದ್ದರು. ಆ ಕ್ಷಣವೇ ಅವರೊಂದಿಗೆ ಕಳೆದ ಕೊನೆಯ ಕ್ಷಣವಾಗುತ್ತದೆ ಎಂದು ನಾವು ಭಾವಿಸಿರಲಿಲ್ಲ. ಅವರೊಂದಿಗೆ ಕಳೆದ ಪ್ರತಿಯೊಂದು ಕ್ಷಣವೂ ಆನಂದದಾಯಕವಾಗಿರುತ್ತಿತ್ತು. ಅವರ ತಿಳಿಹಾಸ್ಯದ ವ್ಯಕ್ತಿತ್ವ ಸದಾ ನೆನಪಿನಲ್ಲಿ ಉಳಿಯುವಂತದ್ದು,” ಎಂದು ಶ್ರೀಗಳು ಅಂತಿಮ ನಮನ ಸಲ್ಲಿಸುವಾಗ ಭಾವುಕರಾಗಿ ನುಡಿದರು.

“ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ. ಆ ಪುಣ್ಯಾತ್ಮಕ್ಕೆ ಚಿರಶಾಂತಿ ದೊರೆಯಲಿ,” ಎಂದು ಜಗದ್ಗುರುಗಳು ಪ್ರಾರ್ಥಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now