‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ: ಕಾರ್ಖಾನೆ ಮುಚ್ಚುತ್ತಿರುವ ವಿಚಾರಕ್ಕೆ ಯತ್ನಾಳ್ ಆಕ್ರೋಶ

suddionenews
1 Min Read

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ಜಾರಿ ಮಾಡಿದೆ. ಪರಿಸರ ನಿಯಮ ಉಲ್ಲಂಘನೆಯ ಆರೋಪವನ್ನು ಎದುರಿಸುತ್ತಿರುವ ಕಾರಣ ನೋಟೀಸ್ ನೀಡಲಾಗಿದೆ. ಇದೀಗ ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.

ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ.

 

‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ.

 

ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗು ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ ಎಂದಿ ಟ್ವಿಟ್ಟರ್ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *