ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.27 : ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಸೆಪ್ಟೆಂಬರ್ 30 ರಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಕುರಿತು ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರುಗಳ ಒಕ್ಕೂಟದಿಂದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಮುಗಿದು ಮೂವತ್ತು ತಿಂಗಳು ಕಳೆದಿದ್ದರೂ ಇನ್ನು ಮೀಸಲಾತಿಯನ್ನು ಪ್ರಕಟಿಸದೆ ಸರ್ಕಾರ ಸದಸ್ಯರುಗಳ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದರಿಂದ ಯಾವುದೇ ಸಭೆಗಳು ನಡೆಯುತ್ತಿಲ್ಲ. ಮೂಲಭೂತ ಸೌಕರ್ಯಗಳಿಂದ ಸಾರ್ವಜನಿಕರು ವಂಚನೆಗೊಳಗಾಗುತ್ತಿದ್ದಾರೆ. ಕುಂದುಕೊರತೆ ಮತ್ತು ಸಮಸ್ಯೆಗಳನ್ನು ಆಲಿಸಲು ಆಗುತ್ತಿಲ್ಲ. ಸದಸ್ಯರುಗಳ ಅಧಿಕಾರವನ್ನು ಮೊಟಕುಗೊಳಿಸುವ ಅಧಿಕಾರಿಗಳ ಕುತಂತ್ರವನ್ನು ಖಂಡಿಸಿ 30 ರಂದು ಬೆಳಿಗ್ಗೆ 11 ಗಂಟೆಗೆ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಡಲಾಗುವುದು. ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಭೆಯಲ್ಲಿ ವಿನಂತಿಸಲಾಯಿತು.
ಚಿತ್ರದುರ್ಗ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಸುರೇಶ್, ಸದಸ್ಯರುಗಳಾದ ನಸ್ರುಲ್ಲಾ, ಶ್ರೀನಿವಾಸ್, ದಾವೂದ್, ಹರೀಶ್, ಜಯಣ್ಣ, ಶಶಿ, ವೆಂಕಟೇಶ್, ಭಾಗ್ಯಮ್ಮ, ತಾರಕೇಶ್ವರಿ, ಮಾಜಿ ಸದಸ್ಯ ಟಿ.ರಮೇಶ್, ಹೊಳಲ್ಕೆರೆ ಪಟ್ಟಣ ಪಂಚಾಯಿತಿಯ ಕೆ.ಸಿ. ರಮೇಶ್, ಜಮೀಲ್, ಜಯಸಿಂಹ, ಹೊಸದುರ್ಗದ ಶ್ರೀನಿವಾಸ್, ದೊಡ್ಡಯ್ಯ, ಹಿರಿಯೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಜ್ಜಪ್ಪ, ಸಾದತ್‍ವುಲ್ಲಾ ಇನ್ನು ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್