Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ವಿಳಂಬ : ಚಿತ್ರದುರ್ಗದಲ್ಲಿ ನಗರಸಭಾ ಸದಸ್ಯರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.30  : ಜಿಲ್ಲೆಯಾದ್ಯಂತ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟಣೆ ವಿಳಂಭವಾಗುತ್ತಿರುವುದನ್ನು ಖಂಡಿಸಿ ನಗರಸಭೆ ಸದಸ್ಯರುಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು, ರಾಜ್ಯದ ಮುಖ್ಯಮಂತ್ರಿ, ಪೌರಾಡಳಿತ ಸಚಿವರಿಗೆ ಮನವಿ ಅರ್ಪಿಸಿದರು.

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.‌ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಸೆಕ್ಷನ್ 18 ರಲ್ಲಿ ಕೌನ್ಸಿಲರ್‍ಗಳ ಪದಾವಧಿಯು ಮುನ್ಸಿಪಲ್ ಕೌನ್ಸಿಲರನ್ನು ಮೊದಲ ಸಭೆ ನಡೆಸಿದ ದಿನಾಂಕದಿಂದ ಆರಂಭವಾಗತಕ್ಕದ್ದೆಂಬ ನಿಯಮವಿರುತ್ತದೆ.

ಪ್ರತಿ ಬಾರಿಯೂ ರಾಜ್ಯ ಸರ್ಕಾರದ ನಿರ್ಲಕ್ಷೆಯಿಂದ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗಧಿ ಅನಗತ್ಯ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ತೊಂದರೆಯಾಗುತ್ತಿದೆ. ಅದಕ್ಕಾಗಿ ಮೀಸಲಾತಿಯನ್ನು ಬೇಗನೆ ಪ್ರಕಟಿಸಿ ಚುನಾಯಿತ ಪ್ರತಿನಿಧಿಗಳಿಗೆ ನ್ಯಾಯ ಒದಗಿಸಬೇಕೆಂದು ಸದಸ್ಯರುಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ್‍ಗೊಪ್ಪೆ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಸುರೇಶ್, ಮಾಜಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರುಗಳಾದ ಭಾಸ್ಕರ್, ನಸ್ರುಲ್ಲಾ, ಅನಿತರಮೇಶ್, ತಾರಕೇಶ್ವರಿ, ಭಾಗ್ಯಮ್ಮ, ಅನುರಾಧ ರವಿಶಂಕರ್, ಮಾಜಿ ಸದಸ್ಯ ಟಿ.ರಮೇಶ್, ಹೊಸದುರ್ಗದ ಶ್ರೀನಿವಾಸ್, ದೊಡ್ಡಯ್ಯ, ಹೊಳಲ್ಕೆರೆಯ ಕೆ.ಸಿ.ರಮೇಶ್, ಅಶೋಕ್, ಮುರುಗೇಶ್, ಹಿರಿಯೂರಿನ ಅಜ್ಜಪ್ಪ, ಶಿವರಂಜಿನಿ, ಚಳ್ಳಕೆರೆಯ ರಮೇಶ್‍ಗೌಡ, ಮೊಳಕಾಲ್ಮುರುವಿನ ಲಕ್ಷ್ಮಣ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment