ನವದೆಹಲಿ : ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.
ಇಂದು ಮಧ್ಯಾಹ್ನ ಸಿಬಿಐ ತನಿಖೆಗೆ ಹಾಜರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೊದಲು ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದರು.
ಅದರ ನಂತರ, ಅಧಿಕಾರಿಗಳು ಬಂಧನವನ್ನು ಘೋಷಿಸಿದರು.ಅಧಿಕಾರಿಗಳು ಸಿಸೋಡಿಯಾ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.
ನಾಳೆ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಸಿಸೋಡಿಯಾ ಬಂಧನದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಿಬಿಐ ಕಚೇರಿಯ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಯಾವುದೇ ರೀತಿಯ ಆತಂಕ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
मनीष बेक़सूर हैं। उनकी गिरफ़्तारी गंदी राजनीति है। मनीष की गिरफ़्तारी से लोगों में बहुत रोष है। लोग सब देख रहे हैं। लोगों को सब समझ आ रहा है। लोग इसका जवाब देंगे।
इस से हमारे हौसले और बढ़ेंगे। हमारा संघर्ष और मज़बूत होगा।
— Arvind Kejriwal (@ArvindKejriwal) February 26, 2023
ದೆಹಲಿ ಮದ್ಯ ಹಗರಣದಲ್ಲಿ ಸಿಬಿಐ ಮತ್ತು ಇಡಿ ಅಧಿಕಾರಿಗಳು ಈಗಾಗಲೇ 12 ಜನರನ್ನು ಬಂಧಿಸಿದ್ದಾರೆ. ನಿಯಮಗಳಿಗೆ ವಿರುದ್ಧವಾಗಿ ಟೆಂಡರ್‌ಗಳನ್ನು ಕರೆಯಲಾಗಿದೆ ಎಂಬ ಆರೋಪಗಳು ಸಿಸೋಡಿಯಾ ವಿರುದ್ಧ ಇವೆ.
ಈ ಕ್ರಮದಲ್ಲಿ.. ಸಿಬಿಐ ತನಿಖೆಗೂ ಮುನ್ನ ಮನೀಶ್ ಸಿಸೋಡಿಯಾ ಮಾಡಿರುವ ಟ್ವೀಟ್ ಇದೀಗ ವೈರಲ್ ಆಗಿದೆ. “ಇವತ್ತು ಮತ್ತೆ ಸಿಬಿಐ ವಿಚಾರಣೆಗೆ ಹೋಗುತ್ತಿದ್ದೇನೆ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಆದರೆ… ಈ ವಿಚಾರಣೆಯ ನಂತರ ಕೆಲವು ತಿಂಗಳು ಜೈಲಿನಲ್ಲಿ ಇರಬೇಕಾಗಿ ಬಂದರೂ ಲೆಕ್ಕ ಹಾಕುವುದಿಲ್ಲ. ಸಿಸೋಡಿಯಾ ಅವರು ಟ್ವಿಟರ್‌ನಲ್ಲಿ ಉಲ್ಲೇಖಿಸಿರುವುದು ಸಂಚಲನ ಮೂಡಿಸಿದೆ.
CBI दफ़्तर जाने से पहले दिल्ली के लोगों से मेरा संबोधन | LIVE https://t.co/ZOR4gaDnYm
— Manish Sisodia (@msisodia) February 26, 2023