ದೆಹಲಿ: ಇಲ್ಲಿನ ಮುಂಡ್ಕಾದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದಯರಂತ ಸಂಭವಿಸಿ, ಸಾವು ನೋವುಗಳು ಆಗಿದೆ. ಸುಮಾರು 27 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ 19 ಮಂದಿ ನಾಪತ್ತೆಯಾಗಿದ್ದಾರೆ.
ಕಟ್ಟಡದಲ್ಲಿಯೇ ಪರಿಶೀಲನೆ ಮಾಡಲಾಗುತ್ತಿದೆ. ಕಟ್ಟಡದಲ್ಲಿ ಸುಟ್ಟು ಹೋಗಿರುವ ಅವಶೇಷಗಳಡಿ ಪರಿಶೀಲನೆ ಮಾಡಲಾಗುತ್ತಿದೆ. ಸ್ಥಳದಲ್ಲೆ ಡಿಎನ್ಎ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಇನ್ನಷ್ಟು ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ.
ಸದ್ಯ ಫ್ಯಾಕ್ಟರಿಯ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬನುಗಾಗಿ ಹುಡುಕಾಟ ಶುರುವಾಗಿದೆ. ಫೈರ್ ಎನ್ಓಸಿ ಇಲ್ಲದೆ ಫ್ಯಾಕ್ಟರಿ ಕಾರ್ಯನಿರ್ವಹಿಸುತ್ತಿತ್ತು. ಈ ದುರಂತಕ್ಕೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದೇ ಈ ಅನಾಹುತಕ್ಕೆ ಕಾರಣ ಎನ್ನಲಾಗಿದೆ.