ನವದೆಹಲಿ: ಕಾಶ್ಮೀರಿ ಫೈಲ್ಸ್ ಸಿನಿಮಾದ ಬಗ್ಗೆ ಮಾತನಾಡಿದ್ದ ಸಿಎಂ ಅರವಿಂದ್ ಕೇಜ್ರಿವಾಲ್, ಇದು ಸುಳ್ಳು ಎಂದಿದ್ದರು. ಈ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಮಾರ್ಚ್ 30 ರಂದು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆಮುತ್ತುಗೆ ಹಾಕಲು ಯತ್ನಿಸಿ, ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಇದೀಗ ದೆಹಲಿ ಪೊಲೀಸರು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜ್ಸವಿ ಸೂರ್ಯ ಅವರಿಗೆ ನೋಟೀಸ್ ನೀಡಿದೆ.
ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಅಂದು ಪ್ರತಿಭಟನೆ ನಡೆಸಿ, ಕೇಜ್ರಿವಾಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಗೇಟ್ ಧ್ವಂಸ ಮಾಡಿದ್ದರು. ಈ ಘಟನೆ ಸಂಬಂಧ ಪೊಲೀಸರು ಈಗಾಗಲೇ 8 ಜನರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ತೇಜಸ್ವಿ ಸೂರ್ಯ ಅವರಿಗೂ ನೋಟೀಸ್ ನೀಡಿದ್ದಾರೆ.
ಇನ್ನು ಕೇಜ್ರಿವಾಲ್ ಅವರ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿದೆ. ಕ್ಷಮೆ ಕೇಳುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದಿದ್ದಾರೆ. ಕೇಜ್ರಿವಾಲ್ ಒಬ್ಬ ಸುಳ್ಳುಗಾರ, ಒಬ್ಬ ಹಿಂದೂ ವಿರೋಧಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿ, ಬಿಜೆಪಿಗರು ಕಾಶ್ಮೀರಿ ಫೈಲ್ಸ್ ಸಿನಿ.ಅ ಪ್ರಚಾರ ಬಡೆಸುತ್ತಿದ್ದಾರೆ. ಹಲವು ರಾಜ್ಯಗಳಲ್ಲಿ ತೆರಿಗೆ ಮುಕ್ತ ಮಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಹೇಳಿ ಸಿನಿಮಾವನ್ನು ಯೂಟ್ಯೂಬ್ ನಲ್ಲಿ ಹಾಕಲು ಹೇಳಿ ಆಗ ಎಲ್ಲರು ಉಚಿತವಾಗಿ ನೋಡುತ್ತಾರೆ. ತೆರಿಗೆ ಮುಕ್ತ ಮಾಡುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದ್ದರು.