Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

---Advertisement---

 

ನವದೆಹಲಿ, ಜ. 27 (ಕರ್ನಾಟಕ ವಾರ್ತೆ) : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment