ಮೈಸೂರು: ಕಳೆದ ಕೆಲವು ದಿನಗಳ ಹಿಂದಷ್ಟೇ ದೆಹಲಿಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಗೆಲುವು ಕಂಡಿದೆ. ಆದರೆ ಈ ಗೆಲುವನ್ನು ಮೈಸೂರಿನ ಯುವಕನ್ನೊಬ್ಬ ಸಂಭ್ರಮಿಸಿದ ರೀತಿಗೆ ಮೈಸೂರಿನಲ್ಲಿ ಬಿಗುವಿನ ವಾತಾವರಣವೇ ನಿರ್ಮಾಣವಾಗಿದೆ. ಉದಯಗಿರಿಯ ಮುಖ್ಯ ರಸ್ತೆಯ ಯುವಕನೊಬ್ಬ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಭಾವಚಿತ್ರವನ್ನು ಹಾಕಿ ಅದರ ಮೇಕೆ ಮುಸ್ಲಿಂ ಧರ್ಮಗುರುಗಳ ಸಾಲುಗಳನ್ನು ಉಲ್ಲೇಖಿಸಿದ್ದ. ಇದರಿಂದ ಗಲಾಟೆ ನಡೆದಿದೆ.
![](https://suddione.com/content/uploads/2024/10/gifmaker_me-5-1.gif)
ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಯ್ತು. ಪ್ರತಿಭಟನೆಯೂ ನಡೆದಿದೆ. ಮುಸ್ಲಿಂ ಸಂಘಟನೆಗಳು ನೂರಾರು ಮಂದಿ ಪೊಲೀಸ್ ಠಾಣೆ ಮುಂದೆ ಸೇರಿ, ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಶಾಂತಿನಗರ ರಸ್ತೆ, ಮಹದೇವಪುರ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಸೋಮವಾರ ರಾತ್ರಿಯ ಈ ಘಟನೆಯಿಂದ ಹಲವರಿಗೆ ಗಾಯಗಳಾಗಿವೆ. ಸದ್ಯ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡು ಪೋಸ್ಟ್ ಹಾಕಿದ್ದ ಯುವಕನನ್ನು ಬಂಧಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಈ ಸಂಬಂಧ ಎಡಿಜಿಪಿ ಹಿತೇಂದ್ರ ಅವರು ಮಾತನಾಡಿ, ಉದಯಗಿರಿ ಗಲಾಟೆಯಲ್ಲಿ ಏಳು ಜನ ಪೊಲೀಸರಿಗೆ ಗಾಯವಾಗಿದೆ. ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರಿಂದ ತಂಡವನ್ನು ರಚನೆ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟರ್ ಹಾಕಿದ ವಿಚಾರದಲ್ಲಿ ಆರೋಪಿಯನ್ನು ಬೇಗ ಬಿಟ್ಟು ಬಿಡುತ್ತಾರೆ ಎಂದು ಗಲಾಟೆ ಮಾಡಿದ್ದಾರೆ. ಪೋಸ್ಟರ್ ವಿಚಾರದಲ್ಲಿ ಕೆಲವು ವದಂತಿ ಹಬ್ಬಿದ್ದಕ್ಕೆ ಗಲಾಟೆಯಾಗಿದೆ. ಗಲಾಟೆ ಹಿಂದೆ ಯಾರಿದ್ದಾರೆ..? ಯಾವುದಾದರೂ ಸಂಘಟನೆ ಇದೆಯಾ ಎಂಬೆಲ್ಲಾ ವಿಚಾರಗಳು ತನಿಖೆಯಿಂದ ಗೊತ್ತಾಗಲಿದೆ ಎಂದಿದ್ದಾರೆ.
![](https://suddione.com/content/uploads/2025/02/site.webp)