Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿಯ ಗೆಲುವು.. ಯುವಕನ ಪೋಸ್ಟ್.. ಮೈಸೂರಿನ ಉದಯಗಿರಿಯಲ್ಲಿ ಬಿಗುವಿನ ವಾತಾವರಣ : ಹೇಗಿದೆ ಪರಿಸ್ಥಿತಿ..?

---Advertisement---

ಮೈಸೂರು: ಕಳೆದ ಕೆಲವು ದಿನಗಳ ಹಿಂದಷ್ಟೇ ದೆಹಲಿಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಗೆಲುವು ಕಂಡಿದೆ. ಆದರೆ ಈ ಗೆಲುವನ್ನು ಮೈಸೂರಿನ ಯುವಕನ್ನೊಬ್ಬ ಸಂಭ್ರಮಿಸಿದ ರೀತಿಗೆ ಮೈಸೂರಿನಲ್ಲಿ ಬಿಗುವಿನ ವಾತಾವರಣವೇ ನಿರ್ಮಾಣವಾಗಿದೆ‌. ಉದಯಗಿರಿಯ ಮುಖ್ಯ ರಸ್ತೆಯ ಯುವಕನೊಬ್ಬ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಭಾವಚಿತ್ರವನ್ನು ಹಾಕಿ ಅದರ ಮೇಕೆ ಮುಸ್ಲಿಂ ಧರ್ಮಗುರುಗಳ ಸಾಲುಗಳನ್ನು ಉಲ್ಲೇಖಿಸಿದ್ದ. ಇದರಿಂದ ಗಲಾಟೆ ನಡೆದಿದೆ.

ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಯ್ತು. ಪ್ರತಿಭಟನೆಯೂ ನಡೆದಿದೆ. ಮುಸ್ಲಿಂ ಸಂಘಟನೆಗಳು ನೂರಾರು ಮಂದಿ ಪೊಲೀಸ್ ಠಾಣೆ ಮುಂದೆ ಸೇರಿ, ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಶಾಂತಿನಗರ ರಸ್ತೆ, ಮಹದೇವಪುರ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಸೋಮವಾರ ರಾತ್ರಿಯ ಈ ಘಟನೆಯಿಂದ ಹಲವರಿಗೆ ಗಾಯಗಳಾಗಿವೆ. ಸದ್ಯ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡು ಪೋಸ್ಟ್ ಹಾಕಿದ್ದ ಯುವಕನನ್ನು ಬಂಧಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಈ ಸಂಬಂಧ ಎಡಿಜಿಪಿ ಹಿತೇಂದ್ರ ಅವರು ಮಾತನಾಡಿ, ಉದಯಗಿರಿ ಗಲಾಟೆಯಲ್ಲಿ ಏಳು ಜನ ಪೊಲೀಸರಿಗೆ ಗಾಯವಾಗಿದೆ. ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರಿಂದ ತಂಡವನ್ನು ರಚನೆ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟರ್ ಹಾಕಿದ ವಿಚಾರದಲ್ಲಿ ಆರೋಪಿಯನ್ನು ಬೇಗ ಬಿಟ್ಟು ಬಿಡುತ್ತಾರೆ ಎಂದು ಗಲಾಟೆ ಮಾಡಿದ್ದಾರೆ. ಪೋಸ್ಟರ್ ವಿಚಾರದಲ್ಲಿ ಕೆಲವು ವದಂತಿ ಹಬ್ಬಿದ್ದಕ್ಕೆ ಗಲಾಟೆಯಾಗಿದೆ. ಗಲಾಟೆ ಹಿಂದೆ ಯಾರಿದ್ದಾರೆ..? ಯಾವುದಾದರೂ ಸಂಘಟನೆ ಇದೆಯಾ ಎಂಬೆಲ್ಲಾ ವಿಚಾರಗಳು ತನಿಖೆಯಿಂದ ಗೊತ್ತಾಗಲಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment