Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸಿ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ‌

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಆ‌.15: ಜನಸಂಖ್ಯೆಯ ಶೇ.1 ರಿಂದ‌ 2 ರಷ್ಟು ಪ್ರಮಾಣದಲ್ಲಿ ಇರುವ ಸರ್ಕಾರಿ ನೌಕರರ ವರ್ಗ ಜನರ ಸೇವೆ ಮಾಡಬೇಕು.‌ ಸರ್ಕಾರ ಯೋಜನೆಗಳನ್ನು ಜನರಿಗೆ ಅನುಕೂಲವಾಗುವಂತೆ ಸಕಾಲದಲ್ಲಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಜನರ ಅಭ್ಯುದಯಕ್ಕಾಗಿ ಸರ್ಕಾರ ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಫಲಾನುಭವಿಗಳ ಜೀವನದಲ್ಲಿ ಮಹತ್ತರ ಬದಲಾವಣೆ ತರಲಿವೆ. ಈ ಯೋಜನೆಗಳನ್ನು ನಿಗದಿತ ಕಾಲ ಮಿತಿಯಲ್ಲಿ ಜನರಿಗೆ ತಲುಪಿಸಿದರೆ, ಇದೇ ಸರ್ಕಾರಿ ನೌಕರರು ದೇಶಕ್ಕೆ ನೀಡುವ ಕೊಡುಗೆಯಾಗಿದೆ. ಸರ್ಕಾರಿ ನೌಕರರನ್ನು ಜನರ ಸೇವಕ ಎಂದು ಕರೆಯಲಾಗಿದೆ. ಜನರ ಸೇವೆಗಾಗಿಯೇ ನಾವು ಇದ್ದೇವೆ. ನಿಷ್ಪಕ್ಷಪಾತ ಜನರ ಸೇವೆ ಮಾಡುವುದಾಗಿ ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಅಧಿಕಾರಗಳು ಹಾಗೂ ನೌಕರರು ಪ್ರತಿಜ್ಞೆ ಮಾಡಬೇಕು ಎಂದು ಅವರು ಹೇಳಿದರು.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಾಗಿದೆ. ಯುವ ಜನರು ಹೆಚ್ಚಾಗಿದ್ದು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೊಡುಗೆ ನೀಡಿದರೆ ದೇಶ ಸಮೃದ್ಧವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಮಧುಸೂದನ್ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment