ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ.ಆ.15: ಜನಸಂಖ್ಯೆಯ ಶೇ.1 ರಿಂದ 2 ರಷ್ಟು ಪ್ರಮಾಣದಲ್ಲಿ ಇರುವ ಸರ್ಕಾರಿ ನೌಕರರ ವರ್ಗ ಜನರ ಸೇವೆ ಮಾಡಬೇಕು. ಸರ್ಕಾರ ಯೋಜನೆಗಳನ್ನು ಜನರಿಗೆ ಅನುಕೂಲವಾಗುವಂತೆ ಸಕಾಲದಲ್ಲಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಜನರ ಅಭ್ಯುದಯಕ್ಕಾಗಿ ಸರ್ಕಾರ ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಫಲಾನುಭವಿಗಳ ಜೀವನದಲ್ಲಿ ಮಹತ್ತರ ಬದಲಾವಣೆ ತರಲಿವೆ. ಈ ಯೋಜನೆಗಳನ್ನು ನಿಗದಿತ ಕಾಲ ಮಿತಿಯಲ್ಲಿ ಜನರಿಗೆ ತಲುಪಿಸಿದರೆ, ಇದೇ ಸರ್ಕಾರಿ ನೌಕರರು ದೇಶಕ್ಕೆ ನೀಡುವ ಕೊಡುಗೆಯಾಗಿದೆ. ಸರ್ಕಾರಿ ನೌಕರರನ್ನು ಜನರ ಸೇವಕ ಎಂದು ಕರೆಯಲಾಗಿದೆ. ಜನರ ಸೇವೆಗಾಗಿಯೇ ನಾವು ಇದ್ದೇವೆ. ನಿಷ್ಪಕ್ಷಪಾತ ಜನರ ಸೇವೆ ಮಾಡುವುದಾಗಿ ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಅಧಿಕಾರಗಳು ಹಾಗೂ ನೌಕರರು ಪ್ರತಿಜ್ಞೆ ಮಾಡಬೇಕು ಎಂದು ಅವರು ಹೇಳಿದರು.
ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಾಗಿದೆ. ಯುವ ಜನರು ಹೆಚ್ಚಾಗಿದ್ದು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೊಡುಗೆ ನೀಡಿದರೆ ದೇಶ ಸಮೃದ್ಧವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಮಧುಸೂದನ್ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…