Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಪರಿಷತ್ ಸ್ಥಾನಕ್ಕೆ ಡಿಮ್ಯಾಂಡ್ ; ಸಿದ್ದರಾಮಯ್ಯ ನೀಡಿದ ಹೆಸರುಗಳು ಯಾವು..?

---Advertisement---

ಬೆಂಗಳೂರು; ಖಾಲಿ ಇರುವ ವಿಧಾನಪರಿಷತ್ ಸದಸ್ಯ ಸ್ಥಾನ ತುಂಬುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರ ಬಳಿ ಈ ಬಗ್ಗೆ ಮನವಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ ಅವರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ. ಸಮುದಾಯದ ನಾಯಕರುಗಳಿಗೆ ಪರಿಷತ್ ಸದಸ್ಯತ್ವ ಸ್ಥಾನ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಹೆಸರಿಟ್ಟಿರೋ ಆ ಮಂದಿ ಯಾರ್ಯಾರು ಎಂಬ ಡಿಟೈಲ್ ಇಲ್ಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಜೊತೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದು, ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಮುಖ್ಯವಾಗಿ ಈ ಸಮುದಾಯದ ನಾಯಕರನ್ನೇ ಪರಿಗಣಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸಂಭಾವ್ಯರ ಪಟ್ಟಿಯನ್ನು ನೀಡಲಾಗಿದೆ ಎನ್ನಲಾಗಿದೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದ್ಯಕ್ಕೆ 33 ಸ್ಥಾನಗಳನ್ನು ಹೊಂದಿದೆ. ಈ ನಾಲ್ವರು ನಾಮನಿರ್ದೇಶನಗೊಂಡ ಬಳಿಕ 37 ಸ್ಥಾನಗಳಾಗಲಿವೆ. ಈ ಮೂಲಕ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗಲಿದೆ.

 

ಒಕ್ಕಲಿಗ ಸಮುದಾಯದಿಂದ ಬಿ.ಎಲ್‌.ಶಂಕರ್‌, ರಘುನಂದನ್‌ ರಾಮಣ್ಣ, ವಿನಯ್‌ ಕಾರ್ತಿಕ್‌ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಬಿ.ಎಲ್‌.ಶಂಕರ್ ಅವರನ್ನು ಪರಿಷತ್‌ಗೆ ನಾಮನಿರ್ದೇಶನ ಮಾಡಿ, ಸಭಾಪತಿ ಸ್ಥಾನ ಕೊಡಬೇಕು ಎಂಬ ಚಿಂತನೆಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರಂತೆ. ಈ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ಕೋಟಾ ಬಿಟ್ಟುಕೊಡಲು ಡಿ.ಕೆ.ಶಿವಕುಮಾರ್ ಅವರೂ ರೆಡಿ ಇಲ್ಲ ಎಂದು ತಿಳಿದುಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment