ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಆ. 21 : ಮಹರ್ಷಿ ಶ್ರೀ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಯ ಹಗರಣದಲ್ಲಿ ಜಾರಿ ನಿರ್ದೇಶನಾ ಲಯವು ನಾಗೇಂದ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಅದರಡಿ ಹಗರಣದ ಆರೋಪ ಹೊತ್ತಿರುವ ನಾಗೇಂದ್ರರು ಇದೀಗ ಸಚಿವರಾಗಿದ್ದು ಅವರು ತಕ್ಷಣವೇ ರಾಜೀನಾಮೆ ಸಲ್ಲಿಸಬೇಕೆಂದು ಭಾರತೀಯ ಜನತಾ ಪಕ್ಷವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಯಿತು.
ಕಳೆದ ಸೋಮವಾರದಿಂದ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸು ತ್ತಿದ್ದು, ಶುಕ್ರವಾರದಂದು ಪ್ರತಿಭಟನೆ ಸ್ಥಳದಿಂದ ಒನಕೆ ಓಬವ್ವ ವೃತ್ತದಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಸಚಿವ ನಾಗೇಂದ್ರರವರ ರಾಜಿನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಕಚೇರಿಗೆ ನುಗ್ಗಲು ಎತ್ತಿಸಿದಾಗ ಪೋಲಿಸರು ಅವರನ್ನು ತಡೆದು ನಿಲ್ಲಿಸಿದರು. ತದ ನಂತರ ಅಪರ ಜಿಲ್ಲಾಧಿಕಾರಿಗಳಿಗೆ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಹಣ ಇದಾಗಿದೆ. ರಾಜ್ಯದ ಖಜಾನೆ ಹಣವನ್ನು ದೇಶದ ವಿವಿಧ ಬ್ಯಾಂಕ್ಗಳ ಖಾತೆಗೆ ಚೆನ್ನಾಗಿ ವರ್ಗಾವಣೆ ಮಾಡಿ ಲೂಟಿ ಮಾಡಲಾಗಿದೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಷರತ್ತಿನ ಮೇಲೆ ಜಾಮೀನು ಪಡೆದು ಸಚಿವ ನಾಗೇಂದ್ರ ಅವರು ಹೊರಗೆ ಇದ್ದಾರೆ. ಅವರು ಆರೋಪಮುಕ್ತರಾಗಿಲ್ಲ. ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಬಿಜೆಪಿ ಹೋರಾಟ ಮಾಡಿದೆ ಎಂದು ತಿಳಿಸಲಾಯಿತು.
ನಾಗೇಂದ್ರ ಅವರು ಸಂವಿಧಾನದ ಮೌಲ್ಯಗಳಿಗೆ ಅಪಚಾರ ಎಸಗಿದ್ದಾರೆ. ಹಗರಣದಲ್ಲಿ ಆಗಿನ ಸಚಿವ ನಾಗೇಂದ್ರ ಅವರ ಮೌಖಿಕ ಸೂಚನೆ ಬಹುದೊಡ್ಡ ಪಾತ್ರ ವಹಿಸಿದೆ. ಸಚಿವರು ಮೌಖಿಕವಾಗಿ ಸೂಚಿಸಿರುವ ಹಿನ್ನೆಲೆಯಲ್ಲೇ ನಿಗಮದ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಇಡೀ ಭ್ರಷ್ಠ್ಟಾಚಾರದಲ್ಲಿ ಸಚಿವರ ಸೂಚನೆ ಮಹತ್ವದ ಪಾತ್ರವಿದೆ ಎಂಬ ಅಂಶಗಳನ್ನು ತನಿಖಾ ಸಂಸ್ಥೆಗಳು ತಿಳಿಸಿದೆ. ಹಗರಣದ ವಿಷಯದಲ್ಲಿ ಆಧಾರ ಇದ್ದಾಗಲೂ ಮತ್ತೆ ಸಚಿವರಾಗುವುದು ಪ್ರಜಾಪ್ರಭುತ್ವ ಹಾಗೂ ಎಸ್ಟಿ ಸಮುದಾಯಕ್ಕೆ ಕಳಂಕ. ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದೆ ಅಷ್ಟೇ. ಕ್ಲೀನ್ ಚಿಟ್ ಸಿಕ್ಕಿಲ್ಲ. ನ್ಯಾಯಾಲಯ ಆರೋಪ ಮುಕ್ತ ಮಾಡಿಲ್ಲ. ಆದ್ದರಿಂದ ಸಚಿವರಾಗಿ ಇರುವುದು ಸರಿಯಲ್ಲ ಎಂಬ ನಿಲುವು ಬಿಜೆಪಿಯದು. ಪಕ್ಷದ ಈ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ ಎಂಬ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತರಲಾಗಿದ್ದು, ರಾಜ್ಯಪಾಲರನ್ನು ನಾಗೇಂದ್ರರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಬೇಕೆಂದು ಬಿಜೆಪಿ ಮನವಿ ಮಾಡಿತು.
ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಎಸ್.ಟಿ.ಮೋರ್ಚಾದ ಮಾಜಿ ಕಾರ್ಯಕಾರಿಣಿ ಸದಸ್ಯರಾದ ಪಾಪೇಶ್ ನಾಯಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಡಾ.ಮಂಜುನಾಥ್ ಬಿಜೆಪಿ ಮೊಳಕಾಲ್ಮೂರು ಮಂಡಲ ಅಧ್ಯಕ್ಷ ರಾಮರೆಡ್ಡಿ, ಜಿಲ್ಲಾ ಓಬಿಸಿ ಮಾರ್ಚಾದ ಪ್ರಧಾನ ಕಾರ್ಯದರ್ಶಿ ಮೂರ್ತಿ, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಹನುಮಂತಪ್ಪ ಉಪ್ಪಾರ್, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ರೇಖಾ, ಉಪಾಧ್ಯಕ್ಷರಾದ ಲಿಂಗರಾಜು, ಜಿಲ್ಲಾ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಬಾಲರಾಜ್, ನಾಯಕನಹಟ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಮೂರ್ತಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋವಿಂದಪ್ಪ, ಜಿಲ್ಲಾ ಎಸ್.ಸಿ. ಮೋರ್ಚಾದ ಉಪಾಧ್ಯಕ್ಷರಾದ ಚಂದ್ರಣ್ಣ, ಮುಖಂಡರಾದ ಚಿರಳ್ಳಿ ತಿಪ್ಪೇಸ್ವಾಮಿ, ಸೋಮು, ಸಿದ್ದಾರ್ಥ, ಬಲರಾಮ್ ಲಿಂಗಣ್ಣ, ಸಣ್ಣ ರಂಗಪ್ಪ, ಕುಮಾರಸ್ವಾಮಿ, ಮರಿಸ್ವಾಮಿ, ಅಜ್ಜಲ್ ಆಹ್ಮದ್, ತಿಪ್ಪೇಸ್ವಾಮಿ, ಓನರಸ್ವಾಮಿ, ಕುಮಾರಸ್ವಾಮಿ, ರೂಪ ರಾಧಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.










