ಬೆಂಗಳೂರು: ಸಿಗಂಧೂರು ಸೇತುವೆ ರೆಡಿಯಾಗಿದೆ. ದೊಡ್ಡ ಮಟ್ಟದಲ್ಲಿ ಸೇತುವೆ ಸಿದ್ಧಗೊಂಡಿದ್ದು, ಓಡಾಟ ಈಗ ಇನ್ನು ಸುಲಭವಾಗಿದೆ. ಈ ಸೇತುವೆಗೆ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವಂತೆ ಒತ್ತಾಯ ಕೇಳಿ ಬಂದಿದೆ. ಹೈಕೋರ್ಟ್ ಗೆ ಅರ್ಜಿ ಕೂಡ ಸಲ್ಲಿಕೆಯಾಗಿದೆ. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠವು, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿಕೆ ಮಾಡಿದೆ.
ಸೇತುವೆ ನಿರ್ಮಾಣಕ್ಕೆ ಯಡಿಯೂರಪ್ಪ ಅವರದ್ದು ಸಾಕಷ್ಟು ಶ್ರಮವಿದೆ. ಸೇತುವೆ ನಿರ್ಮಾಣಕ್ಕೆ ಮೂಲ ಕಾರಣರಾದವರು ಯಡಿಯೂರಪ್ಪ ಅವರು. ಇದರ ಹಿಂದೆ ಅವರ ಶ್ರಮ ಸಾಕಷ್ಟಿದೆ. ಸಾಗರ ತಾಲೂಕಿನ ಜನರ ಭಾವನೆಗಳನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಶಿವಮೊಗ್ಗದ ಬಿದರೆ ಗ್ರಾಮದ ಕೆ.ಹರನಾಥ್ ಅವರು ಈ ಅರ್ಜಿಯನ್ನ ಸಲ್ಲಿಕೆ ಮಾಡಿದ್ದರು. ಸದ್ಯಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನೋಟೀಸ್ ನೀಡಿ, ವಿಚಾರಣೆ ಮುಂದೂಡಿಕೆ ಮಾಡಿದೆ.
ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಗೂ ಮೊದಲೇ ಹೊಸ ಸೇತುವೆಗೆ ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಜುಲೈ 7ರಂದು ಕೇಂದ್ರ ಮತ್ತು ಭೂಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಬಳಿಕ ಹೈಕೋರ್ಟ್ ಗೆ ಅರ್ಜಿಯನ್ನ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಸಿಗಂಧೂರು ಸೇತುವೆ ಸಂಪೂರ್ಣವಾಗಿದೆ. ಉದ್ಘಾಟನೆಗೆ ರೆಡಿಯಾಗಿದೆ. ಉದ್ಘಾಟನೆಗೂ ಮುನ್ನ ಯಡಿಯೂರಪ್ಪ ಅವರ ಹೆಸರಿಡಿ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.






