ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರಧಾನಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ನಾರಾಯಣಸ್ವಾಮಿ ಡಿಜಿಪಿಗೆ ಪತ್ರ ಬರೆದಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಪ್ರಿಯಾಂಕ ಖರ್ಗೆ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೂ ಪತ್ರದ ಪ್ರತಿಯನ್ನು ರವಾನಿಸಲಾಗಿದೆ.
ಪ್ರದೀಪ್ ಈಶ್ವರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷ ಪ್ರಚೋದಕ ಹೇಳಿಕೆ ನೀಡಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ತಮ್ಮ ಪತ್ರದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಘನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಕಾನೂನಿನ ಆಳ್ವಿಕೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಯಾಗಿರುವ ಪ್ರದೀಪ್ ಈಶ್ವರ್ ಅವರು ಪ್ರಧಾನಿ ಮೋದಿ ಬೆಂಬಲಿಗರನ್ನು ‘ದೇಶದ್ರೋಹಿಗಳು’ ಎಂದು ಕರೆದಿರುವುದು ಖಂಡನೀಯ ಹಾಗೂ ಕಾನೂನುಬಾಹಿರವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ರಾಜಕೀಯ ಅಥವಾ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೆಸರಿನಲ್ಲಿ ಕೋಟ್ಯಂತರ ಭಾರತೀಯರು, ಅನಿವಾಸಿ ಭಾರತೀಯರು ಹಾಗೂ ಮೋದಿ ಬೆಂಬಲಿಗರನ್ನು ದೇಶದ್ರೋಹಿಗಳು ಎಂದು ಕರೆಯುವುದು ಸಮಾಜದಲ್ಲಿ ದ್ವೇಷ, ವಿಭಜನೆ ಮತ್ತು ಸಂಘರ್ಷದ ವಾತಾವರಣ ಸೃಷ್ಟಿಸುವ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.ಈ ರೀತಿಯ ಹೇಳಿಕೆಗಳು ಕೇವಲ ರಾಜಕೀಯ ಟೀಕೆಯ ವ್ಯಾಪ್ತಿಯನ್ನು ಮೀರಿ ನಾಗರಿಕರ ಘನತೆಗೆ ಧಕ್ಕೆ ತರುವಂತಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರದೀಪ್ ಈಶ್ವರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















