ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ ಅಕ್ಕಿ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಸಿಗುತ್ತಿಲ್ಲ ಇದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಣ ಕೊಡ್ತೀವಿ ಅಕ್ಕಿ ನೀಡಿ ಎಂದರು ಕೇಂದ್ರ ಸರ್ಕಾರದಿಂದ ಸರಿಯಾದ ರೆಸ್ಪಾನ್ಸ್ ಸಿಕ್ತಾ ಇಲ್ಲ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದಾರೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳ್ಳಂ ಬೆಳಗ್ಗೆ ಮಳೆ ಜೋರಾದ ಪರಿಣಾಮ, ಕಾಂಗ್ರೆಸ್ ನಾಯಕರ ಪ್ರತಿಭಟನೆಗೂ ಅಡ್ಡಿಯಾಗಿದೆ. ಮಳೆಯ ನಡುವೆಯೂ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಪೊಲೀಸರ ಭದ್ರತೆಯೊಂದಿಗೆ ಪ್ರತಿಭಟನೆ ನಡೆಯುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















