Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಪೋ ಮ್ಯಾನೇಜರ್ ಕಿರುಕುಳ : ಶಿವಮೊಗ್ಗದ KSRTC ಚಾಲಕ ಆತ್ಮಹತ್ಯೆ..!

---Advertisement---

ಶಿವಮೊಗ್ಗ: ಡ್ಯೂಟಿ ನೀಡದೆ ಡಿಪೋ ಮ್ಯಾನೇಜರ್ ನೀಡಿದ ಕಿರುಕುಳದಿಂದ ಬಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. 54 ವರ್ಷದ ನಾಗಪ್ಪ ಆತ್ಮಹತ್ಯೆ ಮಾಡಿಕೊಂಡ ಚಾಲಕ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ನಾಗಪ್ಪ ಅವರಿಗೆ ಕಳೆದ ಒಂದೂವರೆ ತಿಂಗಳಿನಿಂದ ಡಿಪೋ ಮ್ಯಾನೇಜರ್ ಡ್ಯೂಟಿ ನೀಡಿರಲಿಲ್ಲ. ಮೂರ್ನಾಲ್ಕು ಬಾರಿ ಡ್ಯೂಟಿ ಸಿಗದೆ ಮನೆಗೆ ವಾಪಾಸ್ ಕೂಡ ಬಂದಿದ್ದರು. ಇದೇ ಮುಂದುವರೆದಾಗ ನಾಗಪ್ಪ ತುಂಬಾನೇ ನೊಂದಿದ್ದಾರೆ. ಮಾನಸಿಕವಾಗಿಯೂ ಕುಗ್ಗಿದ್ದಾರೆ. ಇದೇ ಬೇಸರದಲ್ಲಿ ಮನೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಳೆದ ಸೋಮವಾರವೇ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದರು. ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಬಳಿಕ ಕೆಎಸ್ಆರ್ಟಿ ಬಸ್ ನಲ್ಲಿಯೇ ಮೃತದೇಹವನ್ನ ಸಾಗಿಸಲಾಗಿದೆ. ನೌಕರರೆಲ್ಲಾ ಮೃತ ನಾಗಪ್ಪನ ಅಂತಿಮ ದರ್ಶನ ಪಡೆದು, ಸಂತಾಪ ಸೂಚಿಸಿದರು. ನಾಗಪ್ಪನ ನಿಧನದಿಂದ ಸಿಬ್ಬಂದಿ ಕೂಡ ದುಃಖದಲ್ಲಿದ್ದಾರೆ. ಮ್ಯಾನೇಜರ್ ನೀಡಿದ ಕಿರುಕುಳವೋ, ಮತ್ತೊಂದು ಒಂದು ಜೀವವಂತು ಹೋಗಿದೆ. ಮನೆಯ ಜವಾಬ್ದಾರಿ ಹೊತ್ತಿದ್ದ ಯಜಮಾನನ್ನ ಕಳೆದುಕೊಂಡ ಕುಟುಂಬ ಮುಂದೇನು ಎಂಬ ಆತಂಕದಲ್ಲಿದೆ. ನಾಗಪ್ಪ ಕೂಡ ಒಂದು ಕ್ಷಣ ಯೋಚನೆ ಮಾಡಿದ್ದರೆ ಇಷ್ಟೆಲ್ಲಾ ಆಘಾತವಾಗುತ್ತಿರಿಲಿಲ್ಲವೇನೋ. ಮಾನಸಿಕ ನೋವು ಪ್ರಾಣವನ್ನೇ ಕಳೆದುಕೊಂಡಿದೆ. ಅವರ ಕುಟುಂಬಸ್ಥರಿಗೆ ಆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನೌಕರರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now