ಚಿತ್ರದುರ್ಗ. ನ.05: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟುಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿವೆ. ಇದರಿಂದ ಜನರ ಆರೋಗ್ಯವೂ ಹದಗೆಡುತ್ತಿದ್ದು, ಪ್ರಾಣಿ-ಪಕ್ಷಿಗಳಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸರಳ ರೀತಿಯಲ್ಲಿ ಹಾಗೂ ಮಾಲಿನ್ಯ ರಹಿತವಾಗಿ ಭಕ್ತಿಪೂರ್ವಕವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ರಮ್ಯಾ.ಎಸ್ ಕೋರಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳು, ಕರ್ನಾಟಕ ಸರ್ಕಾರದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆಯಂತೆ ಸಾರ್ವಜನಿಕರು ಕೆಲವು ಪ್ರಮುಖ ನಿಯಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ರೀತಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಕಟ್ಟುನಿಟ್ಟಾಗಿ ನಿμÉೀಧಿಸಲಾಗಿದೆ. ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಅಧಿಕೃತ ಹಾಗೂ ಅನುಮೋದಿತ ಮಾರಾಟಗಾರರಿಂದ ಖರೀದಿಸಬೇಕಾಗಿದೆ.

ಹಸಿರು ಪಟಾಕಿಗಳನ್ನು ಗುರುತಿಸಲು ಪಟಾಕಿ ಬಾಕ್ಸ್ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (NEERI) ಇವರ ಲೋಗೋ, ನೋಂದಾಯಿತ ಸಂಖ್ಯೆ ಹಾಗೂ ಕ್ಯೂಆರ್ ಕೋಡ್ (QR Code) ಮುದ್ರಿತವಾಗಿರುತ್ತದೆ. ಸಾರ್ವಜನಿಕರು ಈ ಲಾಂಛನಗಳನ್ನು ಪರಿಶೀಲಿಸಿ ಹಸಿರು ಪಟಾಕಿಗಳನ್ನು ಖರೀದಿಸಿ ಪರಿಸರ ಕಾಪಾಡಲು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.









