ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ಕಾರು ನಿಲ್ಲಿಸಿ ಎಳನೀರು ಕುಡಿದು ಮೂತ್ರ ವಿಸರ್ಜನೆಗೆಂದು ನಿಂತಾಗ ಉಪ ಸಭಾಪತಿ
ರುದ್ರಪ್ಪ ಲಮಾಣಿಯವರಿಗೆ ಬೈಕ್ ಸವಾರನೊಬ್ಬ ಗುದ್ದಿದ ಪರಿಣಾಮ ಉಪ ಸಭಾಪತಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಅವರನ್ನು ತಕ್ಷಣವೇ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆದೊಯ್ಯಲಾಯಿತು. ಅಪಘಾತ ಪಡಿಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ.


