ಹಾವೇರಿ, ಏಪ್ರಿಲ್ 04 : ವಿಧಾನಸಭೆ ಉಪಸಭಾಪತಿ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಎಸ್ಕಾರ್ಟ್ ವಾಹನವು ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಡಿಕ್ಕಿ ಹೊಡೆದ ಘಟನೆ ಹಾವೇರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹಳೇ ಪಿ.ಬಿ. ರಸ್ತೆಯಲ್ಲಿ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ ಕಡೆಗೆ ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ವಾಕರಸಾಸಂ ಬಸ್ (ಕೆಎ 27 ಎಫ್ 0726) ಗೆ ಹಿಂಬದಿಯಿಂದ ವೇಗವಾಗಿ ಬಂದ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಗೆ ಬಸ್‌ನ ಹಿಂಭಾಗ ಮತ್ತು ಎಸ್ಕಾರ್ಟ್ ವಾಹನದ ಮುಂಭಾಗ ಜಖಂಗೊಂಡಿವೆ. ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಬಹಿರಂಗವಾಗಿದೆ.ಈ ಸಂಬಂಧ ಎಸ್ಕಾರ್ಟ್ ವಾಹನ ಚಾಲಕ, ಪೊಲೀಸ್ ಸಿಬ್ಬಂದಿ ಚನ್ನಬಸಪ್ಪ ಅರ್ಚಕ ವಿರುದ್ಧ ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
















