ಗೌರಸಮುದ್ರ ಮಾರಮ್ಮ ದೇವಾಲಯದ ಕಡತ ನ್ಯಾಯಾಲಯಕ್ಕೆ ಸಲ್ಲಿಸದೇ ಕರ್ತವ್ಯ ಲೋಪ: ತಹಶೀಲ್ದಾರ್ ಸೇರಿ ಇಬ್ಬರ ವಿರುದ್ಧ ಚಿತ್ರದುರ್ಗದಲ್ಲಿ ಎಫ್.ಐ.ಆರ್ ದಾಖಲು

 

ಸುದ್ದಿಒನ್, ಚಿತ್ರದುರ್ಗ ಅ.12: ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಮಾರಮ್ಮ ದೇವಾಲಯಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯದ ವಿಚಾರಣೆಗೆ ಮಂಡಿಸದೆ ಕರ್ತವ್ಯ ಲೋಪವೆಸಗಿರುವ ಜಿಲ್ಲಾಧಿಕಾರಿಗಳ ಕಚೇರಿ ಮುಜರಾಯಿ ಶಾಖೆಯ ಧಾರ್ಮಿಕ ದತ್ತಿ ತಹಶೀಲ್ದಾರ್ ಬಿ.ಎಸ್.ವೆಂಕಟೇಶ್ ಹಾಗೂ ದ್ವಿತೀಯ ದರ್ಜೆ ಸಹಾಯಕ ವೀರಭದ್ರಪ್ಪ ಅವರ ವಿರುದ್ಧ ಅಕ್ಟೋಬರ್ 11 ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ಪತ್ರಾಂಕಿತ ಸಹಾಯಕರಾದ ಸಂತೋಷ್ ಕುಮಾರ್ ಜಿ. ಅವರು ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿಗೆ ಅನುಗುಣವಾಗಿ ಎಫ್‍ಐಆರ್ ದಾಖಲಾಗಿದೆ.  ಗೌರಸಮುದ್ರ ಮಾರಮ್ಮ ದೇವಾಲಯದ ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಪ್ರಕರಣದ ಕಡತವು ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ ಧಾರ್ಮಿಕ ದತ್ತಿ ತಹಶೀಲ್ದಾರ್ ಕಚೇರಿಯಲ್ಲಿ ಇರುತ್ತದೆ. ಇವರು ಕಡತವನ್ನು 2023ರ ಸೆಪ್ಟೆಂಬರ್ 08 ರಂದು ಹಾಗೂ ಸೆಪ್ಟೆಂಬರ್ 27 ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಿರುವುದಿಲ್ಲ. ನ್ಯಾಯಾಲಯದ ವಿಚಾರಣೆಗೆ ಕಡತವನ್ನು ಹಾಜರು ಪಡಿಸದ ಕಾರಣ 2023 ರ  ಸೆಪ್ಟೆಂಬರ್ 30 ರಂದು ಜಿಲ್ಲಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಅನ್ನು ಜಾರಿ ಮಾಡಿದ್ದರು.  ಅದಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಮುಂದಿನ ವಿಚಾರಣೆ ಒಳಗಾಗಿ ಕತಡವನ್ನು ಹಾಜರುಪಡಿಸುತ್ತೇವೆ ಎಂಬುದಾಗಿ ಉತ್ತರ ನೀಡಿದ್ದರು. ಪ್ರಕರಣವು 2023ರ ಅಕ್ಟೋಬರ್ 11ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಿಗದಿಯಾಗಿ, ಅಧಿಕಾರಿ, ಸಿಬ್ಬಂದಿ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಿಲ್ಲ. ವಾದಿಗಳ ಪರ ವಕೀಲರು ವಕಾಲತನ್ನು ವಹಿಸಿದ್ದು, ವಕೀಲರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು, ಆದರೆ, ನ್ಯಾಯಾಲಯದ ಬೆಂಚ್ ಕ್ಲರ್ಕ್ ಅವರು ನ್ಯಾಯಾಲಯದಲ್ಲಿ ಕಡತ ಸಲ್ಲಿಸಿಲ್ಲ ಎಂಬುದಾಗಿ ತಿಳಿಸಿದ್ದು, ಜಿಲ್ಲಾಧಿಕಾರಿಗಳು ಸಿಬ್ಬಂದಿಗೆ ಕಡತದ ಬಗ್ಗೆ ವಿಚಾರಣೆ ಮಾಡಲಾಗಿ ಸಿಬ್ಬಂದಿಯವರು ಕಡತವು ಕಳೆದುಹೋಗಿರುತ್ತದೆ ಎಂದು ತಿಳಿಸಿರುತ್ತಾರೆ.

ಸಿಬ್ಬಂದಿಯವರು ನ್ಯಾಯಾಲಯದ ವಿಚಾರಣೆ ದಿನ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ  ಗೌರಸಮುದ್ರ ಮಾರಮ್ಮ ದೇವಾಲಯದ ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಪ್ರಕರಣದ ಕಡತವನ್ನು ಹಾಜರುಪಡಿಸಿ, ಪ್ರಕರಣದ ಸಂಬಂಧ ವಾಸ್ತವಾಂಶದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ಸಿಬ್ಬಂದಿಯ ಕರ್ತವ್ಯವಾಗಿದ್ದು, ನ್ಯಾಯಾಲಯಕ್ಕೆ ಕಡತ ಹಾಜರುಪಡಿಸದೇ, ತಮ್ಮ ಸುಪರ್ದಿಯಲ್ಲಿದ್ದ ಕಡತವನ್ನು ಕಳೆದು ಹಾಕಿ, ಪಕ್ಷಗಾರರ, ನ್ಯಾಯವಾದಿಗಳಿಗೆ ತೊಂದರೆಯನ್ನುಂಟು ಮಾಡಿ, ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷತನ ಮತ್ತು ಬೇಜವಾಬ್ದಾರಿತನ  ತೋರಿರುವುದು ಅಪರಾಧವಾಗಿರುತ್ತದೆ ಎಂಬುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಜರಾಯಿ ಶಾಖೆಯ ಧಾರ್ಮಿಕ ದತ್ತಿ ತಹಶೀಲ್ದಾರ್ ಬಿ.ಎಸ್.ವೆಂಕಟೇಶ್ ಹಾಗೂ ದ್ವಿತೀಯ ದರ್ಜೆ ಸಹಾಯಕ ವೀರಭದ್ರಪ್ಪ ಅವರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

suddionenews

Recent Posts

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

1 hour ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

4 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

5 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

14 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

14 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

14 hours ago