ಚಿತ್ರದುರ್ಗ, (ಮೇ.20) : ಫೇಸ್ಬುಕ್ ನಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಕನನ್ನು ಹೊಸದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.
ಹೊಸದುರ್ಗ ತಾಲ್ಲೂಕಿನ ಕಾನುಬೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ
ಶಾಂತಮೂರ್ತಿ ಅಮಾನತ್ತುಗೊಂಡ ಶಿಕ್ಷಕ.
ಇಂದು ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಕಳೆದ ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು ಮಾಡಿದ್ದ ಸಾಲಗಳ ವಿಚಾರವಾಗಿ ಪ್ರಸ್ತಾಪಿಸಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕ ಶಾಂತಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಎಲ್ಲಾ ಮುಖ್ಯಮಂತ್ರಿಗಳು ಮಾಡಿದ ಒಟ್ಟು ಸಾಲ 71,331 ಕೋಟಿಯಾದರೆ, ಸಿದ್ದರಾಮಯ್ಯನವರು ಮಾಡಿದ ಸಾಲವೇ 2,42,000 ಕೋಟಿ ಆಗಿದೆ.
ಬಿಟ್ಟೆ ಭಾಗ್ಯ ಕೊಡದೆ ಇನ್ನೇನು ಎಂದು ಮುಖ್ಯಮಂತ್ರಿಗಳ ವಿರುದ್ಧ ಅವಹೇಳನೆ ಮಾಡಿರುವ ವಿಷಯವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಬಂದ ಕಾರಣ, ಜಿಲ್ಲಾಧಿಕಾರಿಯವರ ಸೂಚನೆ ಮೇರೆಗೆ
ಡಿಡಿಪಿಐ ನಿರ್ದೇಶನದಂತೆ ಹೊಸದುರ್ಗ ಶಿಕ್ಷಣಾಧಿಕಾರಿ ಶಿಕ್ಷಕನನ್ನು ಅಮಾನತು ಮಾಡಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…