Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಂಕರಾಚಾರ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಚಿತ್ರದುರ್ಗ ಬ್ರಾಹ್ಮಣ ಸಂಘ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಆದಿ ಗುರು ಶಂಕರಾಚಾರ್ಯರ ಬಗ್ಗೆ ಅವಹೇಳನವಾಗಿ ಮಾತನಾಡಿ ಅನಗತ್ಯ ವಿವಾದ ಉಂಟು ಮಾಡಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗ ಬ್ರಾಹ್ಮಣ ಸಂಘ ಹಾಗೂ ಶಾಂಕರ ತತ್ವ ಅಭಿಯಾನ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

 

ಉಡುಪಿಯ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾಲಕ್ಷೇಪದ ಸಮಾರಂಭದಲ್ಲಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಶಂಕರರು ರಚಿಸಿರುವ ಕೃತಿಗಳು ದುಶಾಸ್ತ್ರ ಎಂಬುದಾಗಿ ಸಮಾಜಕ್ಕೆ ತಪ್ಪು ಸಂದೇಶ ನೀಡಿರುವುದನ್ನು ಬ್ರಾಹ್ಮಣರು ಸಹಿಸುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿರುವುದು ಹಿಂದೂ ಬಾಂಧವರ ಮತ್ತು ಸನಾನತ ಧರ್ಮದ ಸಂಸ್ಥಾಪಕ ಶ್ರೀಮದ್ ಜಗದ್ಗುರು ಶಂಕರಾಚಾರ್ಯರ ಅನುಯಾಯಿಗಳ ಶ್ರದ್ದಾ ಭಕ್ತಿ ನಂಬಿಕೆಗೆ ತೀವ್ರ ಆಘಾತವನ್ನುಂಟು ಮಾಡಿದೆ. ದೈವಾಂಶ ಸಂಭೂತರಾದ ಆಚಾರ್ಯತ್ರಯರು ಸಮಾಜದಲ್ಲಿ ಪರಸ್ಪರ ಸಾಮರಸ್ಯ ಮೂಡಿಸಿದ್ದಾರೆ. ಅವರು ಪ್ರತಿಪಾದಿಸಿದ ಅದ್ವೈತ ತತ್ವವು ಕಲ್ಪಿತವಾದುದಲ್ಲ. ವೇದಶಾಸ್ತ್ರ ಪುರಾಣಗಳಲ್ಲಿ ಪ್ರತಿಪಾದಿತವಾದ ಅದ್ವೈತತ್ವವನ್ನೇ ಪರಮ ಕಾರುಣ್ಯದಿಂದ ನಮಗೆ ತಿಳಿಸಿಕೊಟ್ಟಿದ್ದಾರೆ. ಅಂತಹ ಮಹಾತ್ಮರಿಗೆ ಆಗಿರುವ ನಿಂದನೆ ಧರ್ಮಾಭಿಮಾನಿಗಳ ಭಕ್ತಿಗೆ ಧಕ್ಕೆಯುಂಟಾಗಿದೆ. ಇಂತಹ ಘಟನೆಗಳು ಇನ್ನು ಮುಂದೆ ಮರುಕಳಿಸಬಾರದು ಎಂದು ಬ್ರಾಹ್ಮಣ ಸಂಘದವರು ಒತ್ತಾಯಿಸಿದರು.

 

ಚಿತ್ರದುರ್ಗ ಬ್ರಾಹ್ಮಣ ಸಂಘದ ಕಾರ್ಯದರ್ಶಿ ಡಿ.ಜಿ.ಪ್ರಾಣೇಶ್‍ರಾವ್, ನಿರ್ದೇಶಕರಾದ ಕೆ.ಹೆಚ್.ಶಂಕರ್, ದಿವಾಕರ್, ರಾಘವೇಂದ್ರ, ಶಾಂಕರ ತತ್ವ ಪ್ರಸಾರ ಅಭಿಯಾನ ಚಿತ್ರದುರ್ಗ ಜಿಲ್ಲಾ ಸಂಚಾಲಕಿ ಉಷ, ತಾಲ್ಲೂಕು ಸಂಚಾಲಕರಾದ ವೆಂಕಟೇಶ್ ದೀಕ್ಷಿತ್,  ಜ್ಯೋತಿ, ಚಳ್ಳಕೆರೆ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಅನಂತರಾಮ್ ಗೌತಮ್, ಹೊಸದುರ್ಗ ಬ್ರಾಹ್ಮಣ ಸಂಘದ ಅಧ್ಯಕ್ಷ ಚಂದ್ರಪ್ರಕಾಶ್, ಹಿರಿಯೂರು ಕಾರ್ಯದರ್ಶಿಗಳಾದ ವೆಂಕಟೇಶ್ ದೀಕ್ಷಿತ್, ಅಧ್ಯಕ್ಷ ಸ್ವಾಮಿನಾಥ್, ಪಿ.ನರಸಿಂಹಮೂರ್ತಿ, ಕಾರ್ಯದರ್ಶಿ ಮುರುಳಿಕೃಷ್ಣ, ಚಿತ್ರದುರ್ಗ ಬ್ರಾಹ್ಮಣ ಸಂಘದ ಮಾಜಿ ಅಧ್ಯಕ್ಷರಾದ ಟಿ.ಕೆ.ಚಂದ್ರಶೇಖರರಾವ್. ವಿವಿಧ ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಬ್ರಹ್ಮ ಚೈತನ್ಯ ಮಂಡಳಿಯ ಶಾರದಾ ಸ್ವಾಮಿನಾಥ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now