ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ ಅವರು ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆಸಿದ್ದಾರೆ. ಬಿಜೆಪಿ ನಾಯಕರು ಕೂಡ ಈಗಾಗಲೇ ಮೈತ್ರಿ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಸೆಪ್ಟೆಂಬರ್ 13 ರಂದು ಮೈತ್ರಿ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಜಂಟಿಗೋಷ್ಠಿ ನಡೆಸಲಿದ್ದಾರೆ.
ಈ ಬಾರಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೆ ಎಂದೇ ದೇವೇಗೌಡ ಅವರು ಹೇಳುತ್ತಿದ್ದರು. ಆದರೆ ಈಗ ಇದ್ದಕ್ಕಿದ್ದ ಹಾಗೇ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಹೊರಟಿರುವುದರ ಹಿಂದೆ ಹಲವು ಕಾರಣಗಳು ಇದಾವೆ. ಎರಡೂ ಕಡೆ ಹೋಗದೆ ತಟಸ್ಥವಾದರೆ ಅತಂತ್ರವಾಗುತ್ತದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ಪಕ್ಷ ಗೆಲ್ಲಿಸಬಹುದು. ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಲಾಭವಾಗಲು ಬಹುದು. ಕಾರ್ಯಕರ್ತರು, ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಎಂಬ ಯೋಚನೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಬಿಜೆಪಿ ಚುನಾವಣೆಯಲ್ಲಿ ಜೆಡಿಎಸ್ ಗೆ ಐದು ಕ್ಷೇತ್ರಗಳನ್ನು ನೀಡುವುದಾಗಿ ಹೇಳಿದೆ. ಆದರೆ ಅದರ ಜೊತೆಗೆ ಮಂಡ್ಯ ಕ್ಷೇತ್ರವನ್ನು ಕೇಳಿದೆ. ಬಿಜೆಪಿ ಮಂಡ್ಯವನ್ನು ತನ್ನ ಕಡೆಗೆ ಇಟ್ಟುಕೊಂಡು, ಸುಮಲತಾ ಅವರನ್ನು ಕಣಕ್ಕೆ ಇಳಿಸುವ ಪ್ರಯತ್ನ ಮಾಡಿತ್ತು. ಆದರೆ ಈಗ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಒಪ್ಪಿದ್ದಾರೆ ಎನ್ನಲಾಗ್ತಿದೆ.