Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ ಸಾಮರ್ಥ್ಯ ಬೆಳೆಸಿ : ಪ್ರಾಚಾರ್ಯ ಎಂ.ನಾಸಿರುದ್ದೀನ್

---Advertisement---

ಚಿತ್ರದುರ್ಗ, ಜ.13: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯಗಳ ಸಾಮಥ್ರ್ಯ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್‍ನಲ್ಲಿ ಡಿ.ಎಸ್.ಇ.ಆರ್.ಟಿ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಸಹಯೋಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲಭಾಷಾ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರಿಗೆ ಆಯೋಜಿಸಿದ್ದ  ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಇಂಗ್ಲೀಷ್ ಭಾಷಾ ಕಲಿಕೆಯು ಅಗತ್ಯವಾಗಿದೆ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಭಾಷಾ ಕೌಶಲ್ಯಗಳಾದ ಆಲಿಸುವಿಕೆ, ಮಾತು, ಓದು ಮತ್ತು ಬರಹದಲ್ಲಿ ಸಾಮಥ್ರ್ಯ ಬೆಳೆಸಬೇಕು. ಇದರಿಂದ ವಿದ್ಯಾರ್ಥಿಗಳು ಭವಿಷ್ಯದ ಉನ್ನತ ಶಿಕ್ಷಣ ಪಡೆಯಲು ಸುಲಭವಾಗುತ್ತದೆ ಎಂದು ತಿಳಿಸಿದರು.

ತರಬೇತಿಯಲ್ಲಿ ಪಡೆದ ಜ್ಞಾನವನ್ನು ತರಗತಿ ಕೋಣೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವುದರ ಮೂಲಕ ಮಕ್ಕಳಿಗೆ ಬುನಾದಿ ಸಾಕ್ಷರತೆ ಸಾಮಥ್ರ್ಯ ಬೆಳೆಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಯಟ್ ಉಪ ಪ್ರಾಚಾರ್ಯ ಅಶ್ವಥ್ ನಾರಾಯಣ, ನೋಡಲ್ ಅಧಿಕಾರಿ ಅರ್ಜುಮಂದ್ ಬಾನು, ತರಬೇತಿ ನಿರ್ದೇಶಕ ಎಲ್.ರೇವಣ್ಣ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ಉಪನ್ಯಾಸಕ ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಜಿ.ಜಿ.ನಾಗರಾಜು, ಸುಂದರ್ ರಾಜು, ಮಂಜುನಾಥ್, ರಂಜಿತಾ, ಸ್ಮಿತಾ, ಪ್ರಕಾಶ್, ರಾಧಾ ಮತ್ತು ಶಿಕ್ಷಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...