ಚಿತ್ರದುರ್ಗ, ಜ.13: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯಗಳ ಸಾಮಥ್ರ್ಯ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ನಲ್ಲಿ ಡಿ.ಎಸ್.ಇ.ಆರ್.ಟಿ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಸಹಯೋಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲಭಾಷಾ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಇಂಗ್ಲೀಷ್ ಭಾಷಾ ಕಲಿಕೆಯು ಅಗತ್ಯವಾಗಿದೆ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಭಾಷಾ ಕೌಶಲ್ಯಗಳಾದ ಆಲಿಸುವಿಕೆ, ಮಾತು, ಓದು ಮತ್ತು ಬರಹದಲ್ಲಿ ಸಾಮಥ್ರ್ಯ ಬೆಳೆಸಬೇಕು. ಇದರಿಂದ ವಿದ್ಯಾರ್ಥಿಗಳು ಭವಿಷ್ಯದ ಉನ್ನತ ಶಿಕ್ಷಣ ಪಡೆಯಲು ಸುಲಭವಾಗುತ್ತದೆ ಎಂದು ತಿಳಿಸಿದರು.
ತರಬೇತಿಯಲ್ಲಿ ಪಡೆದ ಜ್ಞಾನವನ್ನು ತರಗತಿ ಕೋಣೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವುದರ ಮೂಲಕ ಮಕ್ಕಳಿಗೆ ಬುನಾದಿ ಸಾಕ್ಷರತೆ ಸಾಮಥ್ರ್ಯ ಬೆಳೆಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಯಟ್ ಉಪ ಪ್ರಾಚಾರ್ಯ ಅಶ್ವಥ್ ನಾರಾಯಣ, ನೋಡಲ್ ಅಧಿಕಾರಿ ಅರ್ಜುಮಂದ್ ಬಾನು, ತರಬೇತಿ ನಿರ್ದೇಶಕ ಎಲ್.ರೇವಣ್ಣ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ಉಪನ್ಯಾಸಕ ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಜಿ.ಜಿ.ನಾಗರಾಜು, ಸುಂದರ್ ರಾಜು, ಮಂಜುನಾಥ್, ರಂಜಿತಾ, ಸ್ಮಿತಾ, ಪ್ರಕಾಶ್, ರಾಧಾ ಮತ್ತು ಶಿಕ್ಷಕರು ಇದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…