ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 10 : ಚಿಕ್ಕಂದಿನಿಂದಲೇ ಮಕ್ಕಳಿಗೆ ವೈಜ್ಞಾನಿಕ ಚಿಂತನೆ ಮೂಡಿಸಿದಾಗ ವಿಜ್ಞಾನಿಗಳಾಗಲು ನೆರವಾಗಲಿದೆ ಎಂದು ಡಾನ್ಬೋಸ್ಕೋ ಐಸಿಎಸ್ಇ. ಶಾಲೆಯ ಪ್ರಾಂಶುಪಾಲರಾದ ಫಾದರ್ ಜೈಮೋನ್ ಜೋಸೆಫ್ ಕರೆ ನೀಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಆಧುನಿಕ ಯುಗದಲ್ಲಿ ವಿಜ್ಞಾನ ಶರ ವೇಗದಲ್ಲಿ ಬೆಳೆಯುತ್ತಿರುವುದರಿಂದ ತಂತ್ರಜ್ಞಾನದ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಪ್ರೋತ್ಸಾಹಿಸುವ ಹೊಣೆಗಾರಿಕೆ ವಿಜ್ಞಾನ ಶಿಕ್ಷಕರುಗಳ ಮೇಲಿದೆ ಎಂದು ಹೇಳಿದರು.

ಹಿರಿಯ ವಿಜ್ಞಾನ ಶಿಕ್ಷಕ ಸಂಪತ್ಕುಮಾರ್ ಮಾತನಾಡಿ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವಂತೆ ತಿಳಿಸಿದರು. ಸಿಬ್ಬಂದಿಯ ಪ್ರತಿನಿಧಿ ಮಾನಸ ಎಲ್.ಜೆ, ಶಿಕ್ಷಕರುಗಳಾದ ಸಂದೀಪ್, ಜಿ.ಇಂಧೂದರ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. 450 ವಿವಿಧ ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಸಿದ್ದಪಡಿಸಿರುವುದನ್ನು ಪೋಷಕರು ಹಾಗೂ ಡಾನ್ಬೋಸ್ಕೋ ಐಸಿಎಸ್ಇ. ಸಿಬ್ಬಂದಿಗಳು ಕುತೂಹಲದಿಂದ ವೀಕ್ಷಿಸಿದರು.









