ಚಿತ್ರದುರ್ಗ, (ಫೆ.18) : ಕಳೆದ ಹನ್ನೆರಡು ವರ್ಷಗಳಿಂದಲೂ ಎಲ್ಲಾ ಸರ್ಕಾರಗಳು ಜನರನ್ನು ವಂಚಿಸಿಕೊಂಡು ಬರುತ್ತಿರುವುದನ್ನು ಬಿಟ್ಟರೆ ಜಿಲ್ಲೆಯಲ್ಲಿ ಅಭಿವೃದ್ದಿ ಮಾತ್ರ ಶೂನ್ಯ ಎಂದು ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅನೇಕ ವರ್ಷಗಳಿಎಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮಧ್ಯಕರ್ನಾಟಕದ ಬಯಲುಸೀಮೆಯಲ್ಲಿ ಬಡವರು ಮತ್ತು ಸಾಮಾನ್ಯ ವರ್ಗದ ಜನರೆ ಹೆಚ್ಚಾಗಿರುವುದರಿಂದ ಮೆಡಿಕಲ್ ಕಾಲೇಜು ತುರ್ತಾಗಿ ಆಗಬೇಕಿದೆ. ಸರ್ಕಾರ ಇನ್ನು ತಡ ಮ
ಾಡಿದ್ದೇ ಆದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದೆಂದು ಹೇಳಿದರು.