Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅಭಿವೃದ್ಧಿ ಕಾಮಗಾರಿಗೆ ವೇಗ; ಚೋಳಗುಡ್ಡದಲ್ಲಿ ಸಿಸಿ ರಸ್ತೆಗೆ ಚಾಲನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಹೊಳಲ್ಕೆರೆ ರಸ್ತೆ, ಚೋಳಗುಡ್ಡದಲ್ಲಿರುವ ಟಿ.ಎಂ.ಕೆ.ಪೀರ್‍ಸಾಬ್ ಕಾಂಪೌಂಡ್‍ನಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಂಗಳವಾರ ಸಿ.ಸಿ.ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿದರು.

ಸಿಎಂಐಡಿಪಿ. ಯೋಜನೆಯಡಿ ನಿರ್ಮಾಣಗೊಳ್ಳಲಿರುವ ರಸ್ತೆಗೆ ಭೂಮಿ ಸಲ್ಲಿಸಿದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ನಿಗಧಿತ ಅವಧಿಯೊಳಗೆ ಗುಣಮಟ್ಟದ ರಸ್ತೆಯಾಗಬೇಕೆಂದು ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಗ್ಯಾರೆಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಲಕ್ಷ್ಮಿಕಾಂತ್, ಮರುಳಾರಾಧ್ಯ, ಪ್ರಕಾಶ್‍ರಾಮನಾಯ್ಕ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಸೈಟ್‍ಬಾಬು, ನಗರಸಭೆ ಮಾಜಿ ನಾಮ ನಿರ್ದೇಶಕ ಸದಸ್ಯ ಹೆಚ್.ಶಬ್ಬೀರ್‍ಭಾಷ, ನಗರಸಭೆ ಪೌರಾಯುಕ್ತೆ ಲಕ್ಷ್ಮಿ, ಮಾಜಿ ಸದಸ್ಯರು ಹಾಗೂ ಚೋಳಗುಡ್ಡದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now