ವಾರಣಾಸಿ : ಕಾಶಿ ವಿಶ್ವನಾಥನ ದೇವಸ್ಥಾನದ ಗರ್ಭಗುಡಿಯಲ್ಲಿ ಭಕ್ತರು ಮತ್ತು ದೇವಾಲಯದ ಸಿಬ್ಬಂದಿ ನಡುವೆ ವಾಗ್ವಾದ ನಡೆದು ಮಾರಾಮಾರಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶನಿವಾರ ಸಂಜೆ ಗರ್ಭಗುಡಿಯಲ್ಲಿ ಶಿವನಿಗೆ ಆರತಿಯನ್ನು ಅರ್ಪಿಸಲಾಗುತ್ತಿದೆ. ಬಾಗಿಲು ಮುಚ್ಚುವ ವೇಳೆ ಇಬ್ಬರು ಭಕ್ತರು ದರ್ಶನಕ್ಕಾಗಿ ಪಟ್ಟು ಹಿಡಿದರು. ಈ ವೇಳೆ ದೇವಸ್ಥಾನದ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು. ಸಿಬ್ಬಂದಿ ಎಷ್ಟೇ ಹೇಳಿದರೂ ಕೇಳದೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.
Devotees, temple staff fight over darshan at Kashi Vishwanath templepic.twitter.com/AgLLBmNPiZ
— Priyathosh Agnihamsa (@priyathosh6447) July 24, 2022
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸಿಬ್ಬಂದಿ ಹಾಗೂ ಇಬ್ಬರು ಭಕ್ತರು ಗರ್ಭಗುಡಿಯಲ್ಲಿ ಪರಸ್ಪರ ತಳ್ಳಿಕೊಂಡು ಹೊಡೆದಾಡಿಕೊಂಡಿದ್ದಾರೆ. ಆದರೆ, ಈ ಘಟನೆ ಬಳಿಕ ದೇವಸ್ಥಾನದ ಸಿಬ್ಬಂದಿ ಆಡಳಿತ ಮಂಡಳಿಗೆ ಪತ್ರ ಬರೆದಿದ್ದಾರೆ. ಪೊಲೀಸರು ತಮಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿ ಪತ್ರದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಏತನ್ಮಧ್ಯೆ.. ಕೆಲ ದಿನಗಳ ಹಿಂದೆ ಕಾಶಿಯಲ್ಲಿ ದರ್ಶನಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ದೇವಸ್ಥಾನದ ಸಿಬ್ಬಂದಿ ನಡುವೆ ಮಾರಾಮಾರಿ ನಡೆದ ಘಟನೆಯ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ನಡುವೆ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.